ವಿಜಯಸಾಕ್ಷಿ ಸುದ್ದಿ, ಗದಗ : ನಗರದ ತೋಂಟದಾರ್ಯ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ಬುಧವಾರ ಭಾರತದ ಏಕತೆಯ ಪ್ರತಿಕ ಎಂದೇ ಗುರುತಿಸಲಾದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಏಕತಾ ದಿನವನ್ನು ಆಚರಿಸಿದರು.
ಕಾರ್ಯಕ್ರಮ ಉದ್ಘಾಟಿಸಿದ ಪ್ರಾಂಶುಪಾಲ ಡಾ. ಎಮ್.ಎಮ್. ಅವಟಿ ಮಾತನಾಡಿ, ಸರ್ದಾರ್ ಪಟೇಲ್ ಅವರ ಆದರ್ಶಗಳು ಹಾಗೂ ದೇಶದ ಏಕತೆಗಾಗಿ ಅವರು ಸಲ್ಲಿಸಿದ ಕೊಡುಗೆಗಳು ಪ್ರತಿ ಭಾರತೀಯನಿಗೂ ಪ್ರೇರಣೆಯಾಗಿದೆ ಎಂದರು.
ಎಲೆಕ್ಟ್ರಿಕಲ್ ವಿಭಾಗದ ಮುಖ್ಯಸ್ಥರಾದ ಡಾ. ಈರಣ್ಣ ಕೋರಚಗಾಂವ ಮಾತನಾಡಿ, ಭಿನ್ನ ಭಾಷೆ, ಸಂಸ್ಕೃತಿ ಮತ್ತು ಸಾಂಸ್ಕೃತಿಕ ವೈವಿಧ್ಯತೆಯ ನಡುವೆಯೂ ನಾವು ಒಟ್ಟಾಗಿರುವುದು ನಮ್ಮ ದೇಶದ ಸೌಂದರ್ಯ ಎಂದರು.
ಪ್ರೊ. ಮಲ್ಲಿಕಾರ್ಜುನ ಜಿ.ಡಿ. ಮತ್ತು ಪ್ರೊ. ತೆಹಸಿನ್ ಶಿಗ್ಲಿ ಅವರು ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಪಟೇಲ್ ಅವರ ಜೀವನದ ಬಗ್ಗೆ ವಿಚಾರ, ಮತ್ತು ರಾಷ್ಟ್ರಭಕ್ತಿಯ ಹಾಡುಗಳೊಂದಿಗೆ ದೇಶದ ಏಕತೆ ಮತ್ತು ಸಾಮರಸ್ಯದ ಮಹತ್ವವನ್ನು ಪ್ರಸ್ತುತಪಡಿಸಿದರು.
ಪ್ರೊ. ಜಗದೀಶ ಶಿವನಗುತ್ತಿ ಮತ್ತು ಪ್ರೊ. ಸಂತೋಷಕುಮಾರ್ ಜಿ.ಎಂ. ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರು `ಏಕತಾ ನಡೆ’ಯಲ್ಲಿ ಪಾಲ್ಗೊಂಡರು. ವಿವಿಧ ವಿಭಾಗಗಳ ವಿದ್ಯಾರ್ಥಿಗಳು ಈ ಓಟದಲ್ಲಿ ಭಾಗವಹಿಸಿ, `ಏಕತೆಯಲ್ಲಿ ಬಲವಿದೆ’ ಎಂಬ ಸಂದೇಶವನ್ನು ಸಾರಿದರು.
ಕಾರ್ಯಕ್ರಮದಲ್ಲಿ ಪ್ರೊ. ಗೌತಮ ರೇವಣಕರ, ಪ್ರೊ. ದಯಾನಂದ ಗೌಡರ, ಪ್ರೊ. ಲೋಕೇಶ, ಪ್ರೊ. ರಮೇಶ ಬಡಿಗೇರ, ಪ್ರೊ. ಆರ್.ವಿ. ಕಡಿ, ಪ್ರೊ. ಐ.ಎಸ್. ಪಾಟೀಲ, ಪ್ರೊ. ಅಶ್ವಿನಿ ಅರಳಿ, ಪ್ರೊ. ಮಧುಸೂಧನ ಕುಲಕರ್ಣಿ, ಪ್ರೊ. ಶೈಲಜಾ ಮುದೇನಗುಡಿ, ಪ್ರೊ. ಲೋಹಿತ್, ಪ್ರೊ. ಪ್ರಸನ್ನ ನಾಡಗೌಡ, ಪ್ರೊ. ಸುನಿಲ ಪಾಟೀಲ, ಪ್ರೊ. ವೀರೇಶ ಮಾಗಳದ, ಪ್ರೊ. ವಿಜಯಕುಮಾರ ಮಾಲಗಿತ್ತಿ, ಪ್ರೊ. ಮಹಾಂತ ಕಟ್ಟಿಮನಿ, ಪ್ರೊ. ಬಸವರಾಜ ಪಾಟೀಲ ಸೇರಿದಂತೆ ಶಿಕ್ಷಕರು ಮತ್ತು ಸಿಬ್ಬಂದಿಗಳು ಪಾಲ್ಗೊಂಡಿದ್ದರು.