ವಿಜಯಸಾಕ್ಷಿ ಸುದ್ದಿ, ಗದಗ: ರಾಷ್ಟ್ರೀಯ ಐಕ್ಯತಾ ಸಪ್ತಾಹ ಕಾರ್ಯಕ್ರಮದ ನಿಮಿತ್ತ ಗದಗ ಜಿಲ್ಲಾಡಳಿತದಲ್ಲಿ ರಾಷ್ಟ್ರೀಯ ಐಕ್ಯತಾ ಪ್ರಮಾಣವಚನವನ್ನು ಅಪರ ಜಿಲ್ಲಾಧಿಕಾರಿ ಡಾ. ದುರುಗೇಶ ಕೆ.ಆರ್ ಬೋಧಿಸಿದರು.
Advertisement
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಬಸನಗೌಡ ಕೊಟೂರ, ಡಿಡಿಎಲ್‌ಆರ್ ರುದ್ರಣ್ಣಗೌಡ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಧಿಕಾರಿ ಶರಣು ಗೋಗೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಉಪನಿರ್ದೇಶಕರಾದ ಪದ್ಮಾವತಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ನಂದಾ ಹಣಬರಟ್ಟಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.


