ಬೆಂಗಳೂರು: ರಾಜ್ಯದಲ್ಲಿ ನಕ್ಸಲ್ ಚಟುವಟಿಕೆ ಶೇ. 99ರಷ್ಟು ಕೊನೆಯಾಗಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಕ್ಸಲರು ಶರಣಾದಾಗ ಶಸ್ತ್ರಾಸ್ತ್ರಗಳು ಇರಲಿಲ್ಲ. ಶಸ್ತ್ರಾಸ್ತ್ರಗಳನ್ನು ಬಿಟ್ಟು ಬಂದಿದ್ದಾರೆ.
ಎಲ್ಲಿ ಎಸೆದು ಬಂದಿದ್ದಾರೆ ಎಂಬುದರ ಕುರಿತು ಪೊಲೀಸರು ತನಿಖೆ ನಡೆಸಲಿದ್ದಾರೆ. ರಾಜ್ಯದಲ್ಲಿ ನಕ್ಸಲ್ ಚಟುವಟಿಕೆ ಶೇ. 99ರಷ್ಟು ಕೊನೆಯಾಗಿದೆ ಎಂದರು. ಇನ್ನೂ ಶರಣಾಗತರಾದ ನಕ್ಸಲರಲ್ಲಿ ತಮಿಳುನಾಡು, ಕೇರಳ ರಾಜ್ಯದವರು ಇದ್ದಾರೆ.
ನಮ್ಮ ಮುಖ್ಯಮಂತ್ರಿಯವರು ಸಂಬಂಧಪಟ್ಟ ರಾಜ್ಯಗಳ ಮುಖ್ಯಮಂತ್ರಿಯವರೊಂದಿಗೆ ಮಾತನಾಡುವುದಾಗಿ ತಿಳಿಸಿದ್ದಾರೆ. ಶರಣಾದ ನಕ್ಸಲಿಗರ ಮೇಲೆ ಬೇರೆ ರಾಜ್ಯಗಳಲ್ಲಿ ಪ್ರಕರಣಗಳಿವೆ. ಆ ರಾಜ್ಯದ ಸರ್ಕಾರಗಳು ಸಹ ತೀರ್ಮಾನ ಕೈಗೊಳ್ಳಬೇಕು ಎಂದರು.



