Chikkamagaluru: ಮತ್ತೆ ನಕ್ಸಲರ ಸದ್ದು: 3 ಬಂದೂಕುಗಳು ಪತ್ತೆ! ಸಿಬ್ಬಂದಿಗಳು ಫುಲ್ ಅಲರ್ಟ್

0
Spread the love

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಮತ್ತೆ ನಕ್ಸಲ್​ ಚಟುವಟಿಕೆ ಶಂಕೆ ವ್ಯಕ್ತವಾಗಿದೆ. ಯಡಗುಂದಿ ಗ್ರಾಮಗಳಲ್ಲಿ ನಕ್ಸಲರು ಗ್ರಾಮಸ್ಥರೊಂದಿಗೆ ಸಭೆ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸರು ತೀವ್ರ ಕಾರ್ಯಾಚರಣೆ ನಡೆಸುತ್ತಿದ್ದು, ಹೌದು ಆ್ಯಂಟಿ ನಕ್ಸಲ್​ ಫೋರ್ಸ್ ಮತ್ತು ಪೊಲೀಸರು ತಪಾಸಣೆಗೆ ಇಳಿದ ವೇಳೆ ಕೊಪ್ಪ ತಾಲೂಕಿನ ಕಡೆಗುಂಡಿ ಗ್ರಾಮದ ಸುಬ್ಬೆಗೌಡ ಎಂಬುವರ ಮನೆಯೊಂದರಲ್ಲಿ 3 ಬಂದೂಕು ಪತ್ತೆಯಾಗಿವೆ.

Advertisement

ಈ ಮನೆಗೆ ನಕ್ಸಲ್ ನಾಯಕಿ ಮುಂಗಾರು ಲತಾ ಮತ್ತು ಆಕೆಯ ತಂಡ ಭೇಟಿ ನೀಡಿರುವ ಸುಳಿವು ಸಿಕ್ಕಿದೆ. ಬಂದೂಕು ಸಿಕ್ಕಿರುವ ಸಂಬಂಧ ಜಯಪುರ ಪೊಲೀಸ್ ‌ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪಶ್ಚಿಮ ವಲಯದ ಐಜಿಪಿ ಅಮಿತ್ ಸಿಂಗ್, ಸಿಐಟಿ ಎಡಿಜಿಪಿ ಪ್ರಣಬ್ ಮೊಹಂತಿ ಭೇಟಿ, ಪರಿಶೀಲನೆ ನಡೆಸಿದರು.

ಒತ್ತುವರಿ, ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ನಕ್ಸಲರು ಕೊಪ್ಪ, ಶೃಂಗೇರಿ ತಾಲೂಕಿನಲ್ಲಿ ಸಭೆಗಳನ್ನು ನಡೆಸಿರುವ ಶಂಕೆ ವ್ಯಕ್ತವಾಗಿದೆ. ಈಗಾಗಲೆ ಇಬ್ಬರನ್ನು ವಶಕ್ಕೆ ಪಡೆದು ಅಧಿಕಾರಿಗಳು ತೀವ್ರ ವಿಚಾರಣೆ ನಡೆಸಿದ್ದಾರೆ. ಉಡುಪಿ-ಚಿಕ್ಕಮಗಳೂರು ಗಡಿ ಭಾಗದಲ್ಲಿ ಸಿಬ್ಬಂದಿಗಳು ಫುಲ್ ಅಲರ್ಟ್ ಆಗಿದ್ದಾರೆ.

 


Spread the love

LEAVE A REPLY

Please enter your comment!
Please enter your name here