ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ನಿತೀಶ್ ಕುಮಾರ್ NDA ಮೈತ್ರಿಕೂಟವು 196 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ವಿರೋಧ ಪಕ್ಷಗಳಾದ ಮಹಾಘಟಬಂಧನ್ (MGB) ಅನ್ನು ಧೂಳೀಪಟ ಮಾಡಿದೆ. ಇನ್ನೂ ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಪ್ರತಿಕ್ರಿಯೇ ನೀಡಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು,
ಬಿಹಾರ ಚುನಾವಣೆಯಲ್ಲಿ ಎನ್‍ಡಿಎ ಜಯಗಳಿಸಿದೆ. ಮೋದಿ ಮತ್ತು ಅಮಿತ್ ಷಾ ಅವರ ಯೋಜನೆ ಯಶಸ್ಸು ಕಂಡಿದೆ. ಮೋದಿಯವರ ನಾಯಕತ್ವಕ್ಕೆ ಮೆಚ್ಚುಗೆ ಚುನಾವಣೆಯಲ್ಲಿ ಸಿಕ್ಕಿದೆ. ಮೋದಿ ಮತ್ತು ಅಮಿತ್ ಷಾ ಚರ್ಚೆ ಮಾಡಿ ಬಿಹಾರ ಸಿಎಂ ಆಯ್ಕೆ ಮಾಡಲಿದ್ದಾರೆ.
ರಾಹುಲ್ ಗಾಂಧಿ ನಾಯಕತ್ವವನ್ನು ಜನರು ತಿರಸ್ಕಾರ ಮಾಡಿದ್ದಾರೆ ಎಂದು ಹೇಳಿದ್ದಾರೆ.ರಾಜ್ಯದಲ್ಲಿ ಕಬ್ಬು ಬೆಳೆಗಾರರ ಸಮಸ್ಯೆ ವಿಚಾರವಾಗಿ, ಶೀಘ್ರವೇ ಈ ಸಮಸ್ಯೆಗೆ ಪರಿಹಾರ ಸಿಗಲಿದೆ. ಸರ್ಕಾರವು ಕಬ್ಬು ಬೆಳೆಗಾರರ ಸಮಸ್ಯೆಗೆ ಸ್ಪಂದಿಸಬೇಕಿದೆ ಎಂದು ಸಲಹೆ ನೀಡಿದ್ದಾರೆ.


