ಕಾನೂನು ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮ

0
Spread the love

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಜಿಲ್ಲೆಯಾದ್ಯಂತ ಸಾರ್ವಜನಿಕ ಹಿತದೃಷ್ಟಿಯಿಂದ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಪೊಲೀಸ್ ಇಲಾಖೆಯ ವತಿಯಿಂದ ಅಗತ್ಯ ಕ್ರಮ ಕೈಕೊಳ್ಳಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ಹೇಳಿದರು.

Advertisement

ಅವರು ಶುಕ್ರವಾರ ಶಿರಹಟ್ಟಿ ಪೊಲೀಸ್ ಠಾಣೆಗೆ ಭೇಟಿ ನೀಡಿ, ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.

ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳ ಮೇಲೆ ತೀವ್ರ ನಿಗಾ ವಹಿಸಿ ಅದನ್ನು ತಡೆಗಟ್ಟುವುದಕ್ಕಾಗಿ ವಿಶೇಷ ತಂಡಗಳನ್ನು ರಚಿಸಲಾಗಿದೆ. ಇಂತಹ ಪ್ರಕರಣಗಳನ್ನು ತಡೆಗಟ್ಟುವುದಕ್ಕಾಗಿ ತಾಲೂಕಾ ಕೇಂದ್ರಗಳಲ್ಲಿ, ಗ್ರಾಮೀಣ ಪ್ರದೇಶಗಳಲ್ಲಿ ಮತ್ತು ಹೆಚ್ಚು ಜನಸಂದಣಿ ಇರುವಂತಹ ಪ್ರದೇಶಗಳಲ್ಲಿ ಸಿಸಿ ಟಿವಿ ಅಳವಡಿಸಲು ಇಲಾಖೆ ಮುಂದಾಗಿದ್ದು, ಈ ಬಗ್ಗೆ ಎಲ್ಲ ಕಡೆಗಳಲ್ಲಿಯೂ ಸಹ ಜಾಗೃತಿ ಮೂಡಿಸಲಾಗುತ್ತಿದೆ. ಸಾರ್ವಜನಿಕರು ಇದರ ಬಗ್ಗೆ ಜಾಗೃತಿಯನ್ನು ವಹಿಸಬೇಕು. ಇದರಿಂದ ಪ್ರಾಪರ್ಟಿ ಅಫೆನ್ಸ್ ಕಡಿಮೆಯಾಗಲು ಸಹಕಾರಿಯಾಗಲಿದೆ ಎಂದರು.

ಇತ್ತೀಚೆಗೆ ಶಿರಹಟ್ಟಿ ಪಟ್ಟಣದಲ್ಲಿ ಒನ್ ಸೈಡ್ ಪಾರ್ಕಿಂಗ್ ವ್ಯವಸ್ಥೆಯನ್ನು ಜಾರಿ ಮಾಡಲಾಗಿದೆ. ಜೊತೆಗೆ ಸಂಶಯಾಸ್ಪದವಾಗಿ ಸಂಚರಿಸುವ ವಾಹನಗಳನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ. ಡ್ರಿಂಕ್ ಅಂಡ್ ಡ್ರೈವ್ ಪ್ರಕರಣಗಳನ್ನು ದಾಖಲಿಸಿ ಅಪಘಾತ ಪ್ರಕರಣಗಳ ಸಂಖ್ಯೆ ಕಡಿಮೆ ಆಗುವಂತೆ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಶಿರಹಟ್ಟಿ ಸಿಪಿಐ ನಾಗರಾಜ ಮಾಡಳ್ಳಿ, ಪಿಎಸ್‌ಐ ಚನ್ನಯ್ಯ ದೇವೂರ, ಕ್ರೈಂ ಪಿಎಸ್‌ಐ ಶೇಖರ ಕಡಬಿನ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

ಪ್ರತಿಯೊಬ್ಬ ಬೈಕ್ ಸವಾರರೂ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಜೊತೆಗೆ ಸೈಬರ್ ಕ್ರೈಂ ಮತ್ತು ನಾರ್ಕೋಟಿಕ್ ಡ್ರಗ್ಸ್ ಬಗ್ಗೆಯೂ ಸಹ ಇಲಾಖೆ ವತಿಯಿಂದ ಹಲವಾರು ಜಾಗೃತಿ ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ. ಸಾರ್ವಜನಿಕರು ಸೈಬರ್ ವಂಚನೆಗೆ ಒಳಗಾಗಬಾರದು. ಅನಾವಶ್ಯಕವಾಗಿ ತಮ್ಮ ವಯಕ್ತಿಕ ಮಾಹಿತಿಯನ್ನು ಯಾರೊಂದಿಗೂ ಹಂಚಿಕೊಳ್ಳಬಾರದು. ಈ ಬಗ್ಗೆ ಹೆಚ್ಚು ಜಾಗೃತಿ ವಹಿಸುವುದು ಅವಶ್ಯವಿದೆ.

– ಬಿ.ಎಸ್. ನೇಮಗೌಡ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು.́


Spread the love

LEAVE A REPLY

Please enter your comment!
Please enter your name here