ದಾವಣಗೆರೆ: ರೈತರ ಪಂಪ್‌ಸೆಟ್‌ಗಳಿಗೆ ಏಳು ತಾಸ್ ವಿದ್ಯುತ್ ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಇಂಧನ ಸಚಿವ ಕೆ ಜೆ ಜಾರ್ಜ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಯಾವುದೇ ವಿದ್ಯುತ್ ಸಮಸ್ಯೆ ಇಲ್ಲ.
Advertisement
ಬೇಸಿಗೆ ಸಮಯದಲ್ಲಿ ವಿದ್ಯುತ್ ಕೊರತೆಯಾಗದಂತೆ ಮುಂಜಾಗ್ರತಾ ಕ್ರಮವಾಗಿ ಈಗಾಗಲೇ 19,500 ಮೆಗಾವ್ಯಾಟ್ ವಿದ್ಯುತ್‌ನ್ನು ಬೇರೆ ಬೇರೆ ರಾಜ್ಯಗಳಿಂದ ಖರೀದಿಸಲಾಗಿದೆ. ರೈತರ ಪಂಪ್‌ಸೆಟ್‌ಗಳಿಗೆ ಏಳು ತಾಸ್ ವಿದ್ಯುತ್ ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಇನ್ನೂ ರಾಜ್ಯದಲ್ಲಿ ಖಾಲಿ ಇರುವ 3 ಸಾವಿರ ಲೈನ್‌ಮೆನ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಏಪ್ರಿಲ್ ತಿಂಗಳೊಳಗಾಗಿ ಪೂರ್ಣಗೊಳ್ಳಲಿದೆ. ಬಳಿಕ ಬಹುತೇಕ ಸಮಸ್ಯೆಗಳು ಬಗೆಹರಿಯಲಿವೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ತಿಳಿಸಿದರು.