HomeBengaluru Newsನಾಳೆ ನೀಟ್ ಮರುಪರೀಕ್ಷೆ: ವಿದ್ಯಾರ್ಥಿಗಳ ಸುಗಮ ಸಂಚಾರಕ್ಕೆ ವಿಶೇಷ ವ್ಯವಸ್ಥೆ!

ನಾಳೆ ನೀಟ್ ಮರುಪರೀಕ್ಷೆ: ವಿದ್ಯಾರ್ಥಿಗಳ ಸುಗಮ ಸಂಚಾರಕ್ಕೆ ವಿಶೇಷ ವ್ಯವಸ್ಥೆ!

For Dai;y Updates Join Our whatsapp Group

ಬೆಂಗಳೂರು: ನಾಳೆ ನೀಟ್ ಮರುಪರೀಕ್ಷೆ ನಡೆಯಲಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುಗಮ ಸಂಚಾರಕ್ಕೆ ವಿಶೇಷ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಪರೀಕ್ಷಾರ್ಥಿಗಳು ಯಾವುದೇ ತೊಂದರೆಯಿಲ್ಲದೆ ಪರೀಕ್ಷಾ ಕೇಂದ್ರ ತಲುಪಲು ಸಂಚಾರಿ ಪೊಲೀಸರು ಅಗತ್ಯ ವ್ಯವಸ್ಥೆ ಮಾಡಿದ್ದು, ಸಹಾಯಕ್ಕಾಗಿ ಟ್ರಾಫಿಕ್ ಕಂಟ್ರೋಲ್ ರೂಮ್ ಸಂಪರ್ಕಿಸಲು ಸೂಚಿಸಲಾಗಿದೆ.

ಇತ್ತೀಚೆಗೆ ಟ್ರಾಫಿಕ್ ಜಾಮ್‌ನಿಂದ ಕೆಲ ವಿದ್ಯಾರ್ಥಿನಿಯರು ಪರೀಕ್ಷಾ ಕೇಂದ್ರಕ್ಕೆ ತಡವಾಗಿ ತಲುಪಿದ ಕಾರಣ ನೀಟ್ ಪರೀಕ್ಷೆ ಬರೆಯಲು ಅವಕಾಶ ಕಳೆದುಕೊಂಡ ಘಟನೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಈ ಹಿನ್ನೆಲೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮಹತ್ವದ ಸೂಚನೆ ನೀಡಿದ್ದಾರೆ.

ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ರದ್ದಾಗಿದ್ದ ನೀಟ್ ಪರೀಕ್ಷೆ ಮರುನಡೆಯುತ್ತಿದ್ದು, ಬೆಂಗಳೂರು, ಮೈಸೂರು, ಬೆಳಗಾವಿ ಸೇರಿದಂತೆ ರಾಜ್ಯದ ವಿವಿಧ ನಗರಗಳಲ್ಲಿ ಹಾಗೂ ದೇಶಾದ್ಯಂತ 500ಕ್ಕೂ ಹೆಚ್ಚು ನಗರಗಳಲ್ಲಿ ಪರೀಕ್ಷೆ ನಡೆಯಲಿದೆ. ಈ ಬಾರಿ ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ ಜಾರಿಗೊಳಿಸಲಾಗಿದೆ.

ಗೃಹ ಸಚಿವರ ಕಚೇರಿ ಬಿಡುಗಡೆ ಮಾಡಿದ ಪ್ರಕಟಣೆಯ ಪ್ರಕಾರ, ಬೆಂಗಳೂರಿನಲ್ಲಿ ಇದೇ ದಿನ ವಿಶ್ವ ಯೋಗ ದಿನಾಚರಣೆ, ಮ್ಯಾರಥಾನ್ ಹಾಗೂ ವಿವಿಧ ಸಂಘಟನೆಗಳ ಕಾರ್ಯಕ್ರಮಗಳು ನಡೆಯಲಿರುವುದರಿಂದ ಸಂಚಾರದಲ್ಲಿ ಕೆಲ ಬದಲಾವಣೆಗಳನ್ನು ಮಾಡಲಾಗಿದೆ. ಆದ್ದರಿಂದ ವಿದ್ಯಾರ್ಥಿಗಳು ಮುಂಚಿತವಾಗಿಯೇ ಪ್ರಯಾಣ ಯೋಜನೆ ರೂಪಿಸಿ ಪರೀಕ್ಷಾ ಕೇಂದ್ರಗಳನ್ನು ಸಮಯಕ್ಕೆ ಸರಿಯಾಗಿ ತಲುಪುವಂತೆ ಮನವಿ ಮಾಡಲಾಗಿದೆ.

ಪ್ರಯಾಣದ ವೇಳೆ ಸಂಚಾರಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆ ಎದುರಾದರೆ ತಕ್ಷಣ ಟ್ರಾಫಿಕ್ ಕಂಟ್ರೋಲ್ ರೂಮ್‌ನ 22943131 ಹಾಗೂ 22943030 ಸಂಖ್ಯೆಗೆ ಕರೆ ಮಾಡಿ ಸಹಾಯ ಪಡೆಯಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img