ಹಗರಿಬೊಮ್ಮನಹಳ್ಳಿ: ರಾಜ್ಯ ಸರ್ಕಾರ ಮಂಡಿಸಿರುವ ಬಜೆಟ್ ರೈತರು ಹಾಗೂ ಬಡವರ ಹಿತಾಸಕ್ತಿಗೆ ಸಹಕಾರಿಯಾಗಿಲ್ಲ ಎಂದು ವಿಜಯನಗರ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಂಜಿವ್ ರೆಡ್ಡಿ ಟೀಕಿಸಿದರು.
ಈ ಕುರಿತು ವಿಜಯಸಾಕ್ಷಿ ಪತ್ರಿಕೆಗೆ ಮಾಹಿತಿ ನೀಡಿದ ಅವರು, ಕೃಷಿ ಕ್ಷೇತ್ರಕ್ಕೆ ಅಗತ್ಯವಾದ ಪ್ರೋತ್ಸಾಹ ಹಾಗೂ ರೈತರ ಸಮಸ್ಯೆಗಳಿಗೆ ಪರಿಹಾರ ನೀಡುವಂತಹ ಸ್ಪಷ್ಟ ಯೋಜನೆಗಳು ಬಜೆಟ್‌ನಲ್ಲಿ ಕಾಣುತ್ತಿಲ್ಲ ಎಂದು ಹೇಳಿದರು.
ಬಡವರು ಹಾಗೂ ಸಾಮಾನ್ಯ ಜನರಿಗೆ ಉಪಯೋಗವಾಗುವ ಯೋಜನೆಗಳು ಕಡಿಮೆಯಾಗಿರುವುದು ನಿರಾಶೆ ತಂದಿದೆ ಎಂದು ಅವರು ಅಭಿಪ್ರಾಯಪಟ್ಟರು.
ಸರ್ಕಾರ ರೈತರು ಮತ್ತು ಬಡವರ ಸಮಸ್ಯೆಗಳತ್ತ ಹೆಚ್ಚಿನ ಗಮನ ಹರಿಸಿ, ಅವರ ಹಿತಾಸಕ್ತಿಗೆ ಅನುಕೂಲವಾಗುವ ಯೋಜನೆಗಳನ್ನು ಜಾರಿಗೆ ತರಬೇಕು ಎಂದು ಅವರು ಒತ್ತಾಯಿಸಿದರು.



