ಯೋಜನೆಗಳ ವಿತರಣೆಯಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ

0
imtiyaz
Spread the love

ವಿಜಯಸಾಕ್ಷಿ ಸುದ್ದಿ, ಗದಗ : ರಾಜ್ಯ ಸರ್ಕಾರದಿಂದ ಅಲ್ಪಸಂಖ್ಯಾತರ ಸಮುದಾಯಗಳ ಉದ್ಯೋಗ, ಶಿಕ್ಷಣ ಮತ್ತು ಅಭಿವೃಧ್ದಿಗಾಗಿ ರಾಜ್ಯ ಸರ್ಕಾರ ತಮ್ಮ ಬಜೆಟ್‌ನಲ್ಲಿ ನೂರಾರು ಕೋಟಿ ರೂ ಅನುದಾನ ಘೋಷಣೆ ಮಾಡಿದೆ. ಆದರೆ ಗದಗ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧಿಕಾರಿಗಳು ಸರ್ಕಾರದ ಜನಪರ ಯೋಜನೆಗಳ ಮಾಹಿತಿಯನ್ನು ನೀಡದೇ ಗದಗ ಜಿಲ್ಲೆಯ ಅಲ್ಪಸಂಖ್ಯಾತರ ಸಮುದಾಯಗಳಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಗದಗ ಜಿಲ್ಲಾ ಸ್ಲಂ ಸಮಿತಿ ಆಧ್ಯಕ್ಷ ಇಮ್ತಿಯಾಜ.ಆರ್.ಮಾನ್ವಿ ಪ್ರಕಟಣೆಯ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಅಲ್ಪಸಂಖ್ಯಾತರ ಸಮುದಾಯದ ಜನರು ಮುಖ್ಯವಾಹಿನಿಗೆ ಬರುವ ನಿಟ್ಟಿನಲ್ಲಿ ಹಲವು ಜನಪರವಾದ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಆದರೆ ಗದಗ ಜಿಲ್ಲೆಯ ಅಲ್ಪಸಂಖ್ಯಾತ ಇಲಾಖೆ ಮತ್ತು ನಿಗಮದ ಅಧಿಕಾರಿಗಳು ಸರ್ಕಾರದ ಯೋಜನೆಗಳನ್ನು ವ್ಯಾಪಕವಾಗಿ ಪ್ರಚಾರ ಮಾಡದೇ ಕಾಟಾಚಾರಕ್ಕಾಗಿ ಕಚೇರಿಗಳಲ್ಲಿ ಮಾತ್ರ ಮಾಹಿತಿಯನ್ನು ನೀಡಿ ನಿಜವಾದ ಬಡ ಫಲಾನುಭವಿಗಳಿಗೆ ಯೋಜನೆಗಳನ್ನು ನೀಡುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ.

ಈ ವೈಫಲ್ಯಕ್ಕೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಗೂ ನಿಮಗದ ಅಧಿಕಾರಿಗಳು ನೇರವಾಗಿ ಕಾರಣರಾಗಿದ್ದಾರೆ. ಇಂತಹ ಜನವಿರೋಧಿ ಅಧಿಕಾರಿಗಳ ವರ್ಗಾವಣೆಗೆ ಆಗ್ರಹಿಸಿ ಗದಗ ಜಿಲ್ಲಾ ಸ್ಲಂ ಸಮಿತಿ ಹಾಗೂ ಗದಗ ಜಿಲ್ಲಾ ಅಲ್ಪಸಂಖ್ಯಾತರ ಸೇವಾ ಸಂಘದ ನೇತೃತ್ವದಲ್ಲಿ ಮೌಲಾನಾ ಆಜಾದ ಕಟ್ಟಡದಲ್ಲಿರುವ ಇಲಾಖೆ ಕಚೇರಿಯ ಮುಂದೆ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.


Spread the love

LEAVE A REPLY

Please enter your comment!
Please enter your name here