HomeKarnataka Newsನೇಹ ಹಿರೇಮಠ್ ಕೊಲೆ ಕೇಸ್: ಜಾಮೀನು ಅರ್ಜಿ ವಜಾ - ಹಂತಕ ಫಯಾಜ್ʼ​​ಗೆ ಮತ್ತೆ ಜೈಲೇ...

ನೇಹ ಹಿರೇಮಠ್ ಕೊಲೆ ಕೇಸ್: ಜಾಮೀನು ಅರ್ಜಿ ವಜಾ – ಹಂತಕ ಫಯಾಜ್ʼ​​ಗೆ ಮತ್ತೆ ಜೈಲೇ ಗತಿ

For Dai;y Updates Join Our whatsapp Group

Spread the love

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ, ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣ ದೇಶಾದ್ಯಂತ ಸಂಚಲನ ಮೂಡಿಸಿತ್ತು. ಈ ಪ್ರಕರಣದ ಆರೋಪಿ ಫಯಾಜ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಮೂರನೇ ಬಾರಿಗೆ ಧಾರವಾಡ ಹೈಕೋರ್ಟ್ ಪೀಠ ತಿರಸ್ಕರಿಸಿ ಆದೇಶ ಹೊರಡಿಸಿದೆ. ಆ ಮೂಲಕ ಆರೋಪಿಗೆ ಮತ್ತೆ ಜೈಲೇ ಗತಿಯಾಗಿದೆ.

ಪ್ರಕರಣದ ಹಿನ್ನೆಲೆ

2024 ಏಪ್ರಿಲ್ 18ರಂದು ಹುಬ್ಬಳ್ಳಿ ನಗರದ ಬಿವಿಬಿ ಕಾಲೇಜು ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಬರ್ಬರವಾಗಿ ಹತ್ಯೆಯಾಗಿದ್ದರು. ಫಯಾಜ್ ಎಂಬ ಆಕೆಯ ಸಹಪಾಠಿ ಮಾರಕಾಸ್ತ್ರಗಳಿಂದ ಇರಿದು ಕೊಲೆ ಮಾಡಿದ್ದನು. ಈ ಘಟನೆ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿತ್ತು. ಹಲವು ಕಡೆ ಪ್ರತಿಭಟನೆಗಳು ನಡೆದಿದ್ದವು.

ಘಟನೆ ನಂತರ ಹುಬ್ಬಳ್ಳಿ ವಿದ್ಯಾನಗರ ಪೊಲೀಸ್ ಠಾಣೆ ಪೊಲೀಸರು ಆರೋಪಿ ಫಯಾಜ್‌ನನ್ನು ಬಂಧಿಸಿದ್ದರು. ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ತನಿಖೆ ಶೀಘ್ರ ಪೂರ್ಣಗೊಳಿಸಿ ಕಠಿಣ ಶಿಕ್ಷೆ ಖಚಿತಪಡಿಸುತ್ತೇವೆ ಎಂದು ಭರವಸೆ ನೀಡಿತ್ತು.

ಕಳೆದ ಆಗಸ್ಟ್‌ನಲ್ಲಿ ಹುಬ್ಬಳ್ಳಿಯೊಂದನೇ ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ಫಯಾಜ್ ಜಾಮೀನು ಅರ್ಜಿ ಸಲ್ಲಿಸಿದ್ದರೂ ಅದು ತಿರಸ್ಕಾರಗೊಂಡಿತ್ತು. ಬಳಿಕ ಹೈಕೋರ್ಟ್ ಮೆಟ್ಟಿಲೇರಿದ್ದರೂ ಅಲ್ಲಿ ಕೂಡ ಜಾಮೀನು ನಿರಾಕರಿಸಲಾಯಿತು. ಸದ್ಯ ಆತ ನ್ಯಾಯಾಂಗ ಬಂಧನದಲ್ಲಿದ್ದಾನೆ.

ಪ್ರಕರಣದ ತ್ವರಿತ ಇತ್ಯರ್ಥಕ್ಕಾಗಿ ಸರ್ಕಾರ ವಿಶೇಷ ಸರ್ಕಾರಿ ಅಭಿಯೋಜಕರನ್ನು ನೇಮಿಸಿದೆ. ಇತ್ತೀಚೆಗೆ ಹುಬ್ಬಳ್ಳಿಯ ಒಂದನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಟ್ರಯಲ್ ಪ್ರಾರಂಭಗೊಂಡಿದ್ದು, ಸಾಕ್ಷಿಗಳ ವಿಚಾರಣೆ ನಡೆಯುತ್ತಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!