ನೇಹಾ ಕೊಲೆ ಹಿಂದೆ ಶಾಸಕರ ಕೈವಾಡವಿದೆ: ತಂದೆ ನಿರಂಜನ್​ ಹಿರೇಮಠ ಆರೋಪ!

0
Spread the love

ಹುಬ್ಬಳ್ಳಿ:- ನನ್ನ ಮಗಳ ಕೊಲೆ ಹಿಂದೆ ಶಾಸಕರ ಕೈವಾಡವಿದೆ ಎಂದು ನೇಹಾ ತಂದೆ ನಿರಂಜನ್​ ಹಿರೇಮಠ ಆರೋಪ ಮಾಡಿದ್ದಾರೆ.

Advertisement

ಕಳೆದ ವರ್ಷ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ನೇಹಾ ಹಿರೇಮಠ ಕೊಲೆ ಪ್ರಕರಣ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ. ಈ ಬಗ್ಗೆ ಮಾತನಾಡಿದ ತಂದೆ ನಿರಂಜನ್​ ಹಿರೇಮಠ, ನೇಹಾ ಹಿರೇಮಠ ಹಂತಕನಿಗೆ ಶಿಕ್ಷೆಯಾಗಿಲ್ಲ. 120 ದಿನಗಳಲ್ಲಿ ನೇಹಾಳ ಸಾವಿಗೆ ನ್ಯಾಯ ಕೊಡಿಸುವ ಭರವಸೆಯನ್ನು ರಾಜ್ಯ ಸರ್ಕಾರ ನೀಡಿತ್ತು. ಆದರೆ, ಇನ್ನೂವರೆಗೂ ನ್ಯಾಯ ದೊರೆತಿಲ್ಲ. ನೇಹಾ ಕೊಲೆ ಹಿಂದೆ ಶಾಸಕರ ಕೈವಾಡವಿದೆ. ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು. ನನ್ನ ಮಗಳ ಆತ್ಮಕ್ಕೆ ಶಾಂತಿ ಸಿಗಬೇಕು ಎಂದು ಆಗ್ರಹಿಸಿದ್ದಾರೆ.

ನನ್ನ ಮಗಳ ಹತ್ಯೆ ನಡೆದು 9 ತಿಂಗಳು ಕಳೆದರೂ ನ್ಯಾಯ ಸಿಗುತ್ತಿಲ್ಲ. ಈ‌ ತನಿಖೆಯ ಹಾದಿ‌ ಎತ್ತ ಸಾಗುತ್ತಿದೆ ಅನ್ನೋದೇ ಗೊತ್ತಾಗುತ್ತಿಲ್ಲ. ಹತ್ಯೆ ಪ್ರಕರಣವನ್ನ ಸಿಬಿಐಗೆ ವಹಿಸಬೇಕೆಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಆಗ್ರಹಿಸಿದ್ದಾರೆ. ಈ ಪ್ರಕರಣದ ತನಿಖೆಯ ಬಗ್ಗೆ ಶ್ರೀರಾಮಸೇನೆ ಅಷ್ಟೇ ಅಲ್ದೇ ಸಾರ್ವಜನಿಕರಲ್ಲಿಯೂ ಹಲವು ಪ್ರಶ್ನೆ ಮೂಡಿಸಿದೆ. ಆದ್ದರಿಂದ ಸಿಬಿಐ ತನಿಖೆ ಆಗಲಿ ಎಂದಿದ್ದಾರೆ. ಕೊಲೆ ಕೇಸ್​ನಲ್ಲಿ ಶಾಸಕರ ಕೈವಾಡ ಇರುವುದು ಸತ್ಯ ಎಂದು ಕಣ್ಣೀರು ಹಾಕಿದ್ದಾರೆ.

ಘಟನೆ ಹಿನ್ನೆಲೆ:-

2024ರ ಎಪ್ರಿಲ್ 18 ರಂದು ಹುಬ್ಬಳ್ಳಿಯ ವಿದ್ಯಾನಗರದ ಬಿವಿಬಿ ಇಂಜಿನಿಯರಿಂಗ್ ಕಾಲೇಜ್‌ನಲ್ಲಿ ವಿದ್ಯಾರ್ಥಿನಿ ನೇಹಾಳ ಕೊಲೆಯಾಗಿತ್ತು. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ಮತ್ತು ಕಾಂಗ್ರೆಸ್ ಮುಖಂಡ ನಿರಂಜನ ಹಿರೇಮಠ ಅವರ ಮಗಳು ನೇಹಾಳನ್ನ ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಪ್ರೀತಿ ನಿರಾಕರಿಸಿದ್ದಕ್ಕೆ ಆರೋಪಿ ಫಯಾಜ್ ನೇಹಾಳನ್ನು ಕೊಲೆ ಮಾಡಿದ್ದನು. ಕೊಲೆ‌ ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಕೊಲೆ ಆರೋಪಿ ಫಯಾಜ್​ನನ್ನು ಕೆಲವೇ ಕ್ಷಣಗಳಲ್ಲಿ ಪೊಲೀಸರು ಬಂಧಿಸಿದ್ದರು.


Spread the love

LEAVE A REPLY

Please enter your comment!
Please enter your name here