ಬೆಂಗಳೂರು:-ಅಂಬೇಡ್ಕರ್ ಅವರನ್ನು ದೂರವಿಟ್ಟು ಸಂವಿಧಾನದಲ್ಲಿ 370ನೇ ವಿಧಿ ಸೇರಿಸಿದ್ದು ನೆಹರು ಎಂದು ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು.
ನಗರದಲ್ಲಿ ಮಾತನಾಡಿದ ಅವರು, ಬಾಬಾ ಸಾಹೇಬ್ ಅಂಬೇಡ್ಕರನ್ನು ದೂರ ಇಟ್ಟು ನೆಹರು ಅವರು ತಮ್ಮ ಅವಶ್ಯಕತೆ ಮತ್ತು ಮುಸ್ಲಿಂ ಓಲೈಕೆಗಾಗಿ 370ನೇ ವಿಧಿಯನ್ನು ಸಂವಿಧಾನದಲ್ಲಿ ಸೇರಿಸಿದರು.
ಡಾ.ಶ್ಯಾಮ್‌ಪ್ರಸಾದ್ ಮುಖರ್ಜಿ ಅವರು ಬಾಬಾ ಸಾಹೇಬ್ ಡಾ.ಅಂಬೇಡ್ಕರ್ ಅವರ ಜೊತೆಯಲ್ಲಿ ಕೆಲಸ ಮಾಡಿದವರು. ಅಂಬೇಡ್ಕರ್ ಅವರು ಸಂವಿಧಾನ ಬರೆದ ಸಂದರ್ಭದಲ್ಲಿ 370ನೇ ವಿಧಿಯನ್ನು ಅಳವಡಿಸಿರಲಿಲ್ಲ. ಬಾಬಾ ಸಾಹೇಬರನ್ನು ದೂರ ಇಟ್ಟು ನೆಹರೂ ಅವರು ತಮ್ಮ ಅವಶ್ಯಕತೆ ಮತ್ತು ಓಲೈಕೆಗಾಗಿ 370ನೇ ವಿಧಿಯನ್ನು ಸಂವಿಧಾನದಲ್ಲಿ ಸೇರಿಸಿದರು. 370ನೇ ವಿಧಿ ಸೇರಿಸಿದ ದಿನದಿಂದ ಡಾ.ಶ್ಯಾಮ್‌ಪ್ರಸಾದ್ ಮುಖರ್ಜಿ ಅವರು ಅದರ ವಿರುದ್ಧ ಹೋರಾಟ ಪ್ರಾರಂಭಿಸಿದ್ದರು. ಈ ದೇಶಕ್ಕಾಗಿ ಹೋರಾಟ ಮಾಡುವ ಸಂದರ್ಭದಲ್ಲಿ ತಮ್ಮ ಪ್ರಾಣವನ್ನು ಸಮರ್ಪಿಸಿದ ಒಬ್ಬ ಮಹಾನ್ ವ್ಯಕ್ತಿ ಡಾ.ಶ್ಯಾಮ್‌ಪ್ರಸಾದ್ ಮುಖರ್ಜಿ ಎಂದು ತಿಳಿಸಿದ್ದಾರೆ.
ಡಾ.ಮುಖರ್ಜಿ ಅವರು ಸ್ವಾತಂತ್ರ್ಯ ನಂತರ ಪ್ರಥಮ ಸರ್ಕಾರದಲ್ಲಿ ಮಂತ್ರಿಯಾಗಿದ್ದವರು. ಆ ಕಾಲಘಟ್ಟದಲ್ಲಿ ಬಹುಮುಖ ಪ್ರತಿಭೆಯಾಗಿದ್ದವರು. ಇವರು ಒಬ್ಬ ರಾಜಕೀಯ ನಾಯಕರು, ಶಿಕ್ಷಣ ತಜ್ಞರು, ಹೋರಾಟಗಾರರು, ಸಮಾಜ ಸೇವಕರು ಹೀಗೆ ಅನೇಕ ರೀತಿಯಲ್ಲಿ ಈ ದೇಶಕ್ಕೆ ಕೊಡುಗೆಯನ್ನು ನೀಡಿದ್ದಾರೆ ಎಂದರು.