ನೆಲಮಂಗಲ:- ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 16 ವರ್ಷದ ಬಾಲಕಿ ನೇಣಿಗೆ ಶರಣಾಗಿರುವ ಘಟನೆ ಜರುಗಿದೆ.
Advertisement
ರಾಮು ಹಾಗೂ ಶೋಭಾ ದಂಪತಿಯ 16 ವರ್ಷದ ಕುಸುಮಾ ಆತ್ಮಹತ್ಯೆ ಮಾಡಿಕೊಂಡ ಬಾಲಕಿ. 6:30ಕ್ಕೆ ಕುಸುಮಾ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಮನೆಯಲ್ಲಿ ಘಟನೆ ನಡೆದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.