ನೆಲಮಂಗಲ: ಫ್ಲೈ ಓವರ್ ಮೇಲಿಂದ ಬಿದ್ದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಅರಿಶಿನಕುಂಟೆ ಗ್ರಾಮದ ಬಳಿ ಜರುಗಿದೆ.
35 ವರ್ಷದ ರಮೇಶ್ ಮೃತ ಸವಾರ. ಇವರು ಫ್ಲೈಓವರ್ ಮೇಲಿಂದ ಸುಮಾರು 20 ಅಡಿ ಕೆಳಗೆ ಬಿದ್ದ ಪರಿಣಾಮ, ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತಡೆ ಗೋಡೆಗೆ
ಬೈಕ್ ಡಿಕ್ಕಿ ಹೊಡೆದ ಪರಿಣಾಮ ಅವಘಡ ಸಂಭವಿಸಿದೆ. ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.



