ನೆಲಮಂಗಲ: ಇಲ್ಲಿನ ಚಿಕ್ಕಬಿದರಕಲ್ಲು ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದೆ. ಸ್ಕೂಟರ್ ಗೆ ಲಾರಿ ಡಿಕ್ಕಿಯಾಗಿ ಬಾಲಕಿ ಸಾವನ್ನಪ್ಪಿದ ಘಟನೆ ಜರುಗಿದೆ.
ವೇಗವಾಗಿ ಬಂದ ಲಾರಿ ಸ್ಕೂಟರ್ ಗೆ ಡಿಕ್ಕಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ತಂದೆ ಪಾರಾಗಿದ್ದು, ಬಾಲಕಿ ಲಾರಿಯ ಚಕ್ರಕ್ಕೆ ಸಿಲುಕಿ ಮೃತಪಟ್ಟಿದ್ದಾರೆ.
ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ಜರುಗಿದೆ. ಲಾರಿ ಚಾಲಕ ನೆಲಮಂಗಲ ಸಂಚಾರಿ ಪೊಲೀಸರ ವಶಕ್ಕೆ ಪಡೆಯಲಾಗಿದೆ.



