ಫುಡ್ ಡೆಲಿವರಿ ಬಾಯ್‌ʼಗಳ ಮೊಬೈಲ್ ದೋಚುತ್ತಿದ್ದ “ನೇಪಾಳಿ ಗ್ಯಾಂಗ್” ಬಂಧನ

0
Spread the love

ಬೆಂಗಳೂರು: ನಗರದಲ್ಲಿ ಫುಡ್ ಡೆಲಿವರಿ ಬಾಯ್‌ಗಳ ಮೊಬೈಲ್‌ಗಳನ್ನು ಗುರಿಯಾಗಿಸಿಕೊಂಡು ದರೋಡೆ ಮಾಡುತ್ತಿದ್ದ ನೇಪಾಳಿ ಮೂಲದ ನಾಲ್ವರು ಆರೋಪಿಗಳನ್ನು ಬೆಳ್ಳಂದೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 9 ಮೊಬೈಲ್‌ ಫೋನ್‌ಗಳು ಹಾಗೂ 3 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.

Advertisement

ದರೋಡೆಗೊಳಗಾದ ಸುರೇಶ್ (22) ಎಂಬವರು ನೀಡಿದ ದೂರಿನ ಮೇರೆಗೆ, ಪೊಲೀಸರು ಪಾರಸ್ ಸಿಂಗ್ (25), ಮುಕೇಶ್ ಸಾಯಿ (19), ಬಿಪಿನ್ ಕರ್ಕಿ (20), ಸಮೀರ್ ಲೋಹಾರ್ ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ. ಫುಡ್​ ಡೆಲಿವರಿಗೆಂದು ತೆರಳುವವರನ್ನು ಅಡ್ಡಗಟ್ಟಿ ಮೊಬೈಲ್​ ಮತ್ತು ಹಣವನ್ನು ಪೀಕುತ್ತಿದ್ದ ಗ್ಯಾಂಗ್​, ಕಳೆದ ತಿಂಗಳು ಸೆ.13ರ ರಾತ್ರಿ ಕಸವನಹಳ್ಳಿ ರಸ್ತೆಯಲ್ಲಿಯೂ ಕೈಚಳಕ ತೋರಿಸಿತ್ತು. ಫುಡ್ ಡೆಲಿವರಿ ಬಾಯ್ ಸುರೇಶ್ ಎಂಬಾತನಿಗೆ ಹಲ್ಲೆ ಮಾಡಿ ಮೊಬೈಲ್ ಕಿತ್ತುಕೊಂಡು ಪರಾರಿಯಾಗಿತ್ತು.

ಮೂರು ಬೈಕ್​ ಗಳಲ್ಲಿ ಬಂದಿದ್ದ ಆರೋಪಿಗಳು ಕೃತ್ಯ ಎಸಗಿದ್ದರು. ಸುರೇಶ್ ಕೊಟ್ಟ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 9 ಮೊಬೈಲ್ ಗಳು ಮತ್ತು ಮೂರು ದ್ವಿಚಕ್ರ ವಾಹನಗಳನ್ನ ವಶಕ್ಕೆ ಪಡೆಯಲಾಗಿದೆ. ಬೆಳ್ಳಂದೂರು ಮಾತ್ರವಲ್ಲದೆ, ಹೆಬ್ಬಗೋಡಿ, ಪರಪ್ಪನ ಅಗ್ರಹಾರ, ಬಂಡೆಪಾಳ್ಯ, HSR ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿಯೂ ಈ ಗ್ಯಾಂಗ್​ ಕೃತ್ಯವೆಸಗಿರೋದು ಬೆಳಕಿಗೆ ಬಂದಿದೆ.


Spread the love

LEAVE A REPLY

Please enter your comment!
Please enter your name here