ವಿಜಯಸಾಕ್ಷಿ ಸುದ್ದಿ, ಗದಗ: ಸರ್ಕಾರದ ಆದೇಶದಂತೆ ಅಧಿಕಾರ ವಹಿಸಿಕೊಂಡ ಗದಗ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿ ಡಾ. ದುರುಗೇಶ ಅವರಿಗೆ ಲಕ್ಕುಂಡಿ ಪಾರಂಪರಿಕ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ. ಶರಣು ಗೋಗೇರಿ ಶಾಲು ಹೊದಿಸಿ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿದರು.
Advertisement
ಈ ಸಂದರ್ಭದಲ್ಲಿ ಗದಗ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಡಾ. ಬಸವರಾಜ ಬಳ್ಳಾರಿ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಾಸನಾಯಕ, ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ಉಪ ಸಮನ್ವಯ ಅಧಿಕಾರಿ ಎಂ.ಎಚ್. ಕಾಂಬಳೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಮೆಹಬೂಬ್ ತುಂಬರಮಟ್ಟಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಅಮಿತ್ ಬಿದರಿ, ಜಿಲ್ಲಾ ವಾರ್ತಾಧಿಕಾರಿ ವಸಂತ ಮಡ್ಲೂರ ಮುಂತಾದವರಿದ್ದರು.