ಬಿಬಿಎಂಪಿ ಕಮಿಷನರ್ ಹುದ್ದೆಗೆ ಹೊಸಬರ ನೇಮಕ: ತುಷಾರ್ ಗಿರಿನಾಥ್ ವರ್ಗಾವಣೆ!

0
Spread the love

ಬೆಂಗಳೂರು:- ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಆಯುಕ್ತ ಹುದ್ದೆಯಿಂದ ತುಷಾರ್ ಗಿರಿನಾಥ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Advertisement

ಎಸ್, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್ ಅವರನ್ನು ಬದಲಾವಣೆ ಮಾಡಲಾಗಿದ್ದು, ಬಿಬಿಎಂಪಿ ಆಡಳಿತಾಧಿಕಾರಿ ಮತ್ತು ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇನ್ನೂ ಹೊಸ ಬಿಬಿಎಂಪಿ ಮುಖ್ಯ ಆಯುಕ್ತರನ್ನಾಗಿ ಮಹೇಶ್ವರ ರಾವ್ ಅವರನ್ನು ನೇಮಕ ಮಾಡಲಾಗಿದೆ.

ತುಷಾರ್​ ಗಿರಿನಾಥ್​ ಅವರು ಕಳೆದ ಎರಡೂವರೆ ವರ್ಷಗಳಿಂದ ಬಿಬಿಎಂಪಿ ಮುಖ್ಯ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದರು. ತುಷಾರ್​ ಗಿರಿನಾಥ್​ ಅವರು ಈ ಹಿಂದೆ ಬೆಂಗಳೂರು ವಿದ್ಯುತ್​ ಸರಬರಾಜು ಕಂಪನಿ ಲಿಮಿಟೆಡ್​ ಮತ್ತು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮುಖ್ಯಸ್ಥರಾಗಿದ್ದರು. ನಗರ ಆಡಳಿತದ ಬಗ್ಗೆ ಅವರ ಆಳವಾದ ತಿಳುವಳಿಕೆ, ನಗರಾಭಿವೃದ್ಧಿ ಇಲಾಖೆ ಪಾತ್ರವನ್ನು ಸಮರ್ಥವಾಗಿ ನಿರ್ವಹಿಸುವ ಆಶಯ ಜನರಲ್ಲಿದೆ.


Spread the love

LEAVE A REPLY

Please enter your comment!
Please enter your name here