HomePolitics Newsನವದೆಹಲಿ: ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಸತೀಶ್ ಜಾರಕಿಹೊಳಿ!

ನವದೆಹಲಿ: ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಸತೀಶ್ ಜಾರಕಿಹೊಳಿ!

For Dai;y Updates Join Our whatsapp Group

Spread the love

ನವದೆಹಲಿ: ಮುಡಾ ಹಗರಣ ರಾಷ್ಟ್ರವ್ಯಾಪಿ ಸದ್ದು ಮಾಡಿದೆ. ಮುಡಾ ಹಗರಣದ ವಿಚಾರವಾಗಿ ರಾಜಕೀಯ ಜಟಾಪಟಿ ಜೋರಾಗಿದೆ. ಮುಖ್ಯಮಂತ್ರಿಗಳ ರಾಜೀನಾಮೆಗಾಗಿ ಬಿಜೆಪಿ ಆಗ್ರಹಿಸುತ್ತಿದೆ. ಇದರ ಬೆನ್ನಲ್ಲೇ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರನ್ನು ಸಚಿವ ಸತೀಶ್ ಜಾರಕಿಹೊಳಿಯವರು ಮಾಡಿದ್ದಾರೆ. ಮಲ್ಲಿಕಾರ್ಜುನ್ ಖರ್ಗೆ ನಿವಾಸದಲ್ಲಿ ಭೇಟಿಯಾಗಿರುವ ಸತೀಶ್ ಜಾರಕಿಹೋಳಿ,

ಪ್ರಸಕ್ತ ರಾಜಕೀಯ ಬೆಳವಣಿಗೆ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಮೂಡಾ ಪ್ರಕರಣದಲ್ಲಿ ನಾವು ಸಿಎಂ ಸಿದ್ದರಾಮಯ್ಯ ಬೆನ್ನಿಗೆ ನಿಂತಿದ್ದೇವೆ. ಪ್ರತಿ ಹಂತದಲ್ಲೂ ನಾವು ಸಮರ್ಥಿಸಿಕೊಳ್ಳುತ್ತಿದ್ದೇವೆ ಎಂದಿದ್ದಾರೆ. ಒಂದು ವೇಳೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸಂದರ್ಭ ಎದುರಾದರೆ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದ ನಾಯಕರಿಗೆ ಸಿಎಂ ಸ್ಥಾನ ಸಿಗಬೇಕು. ಇದಕ್ಕೆ ನಾವೆಲ್ಲ ಒಗ್ಗಟ್ಟಾಗಿ ನಿಂತು ಸಿಎಂ ಸ್ಥಾನವನ್ನು ಸಮುದಾಯಕ್ಕೆ ಪಡೆಯಬೇಕು ಎನ್ನುವ ನಿಟ್ಟಿನಲ್ಲಿ ಖರ್ಗೆ ಅವರ ಜೊತೆಗೆ ಚರ್ಚೆ ನಡೆದಿದೆ ಎನ್ನಲಾಗಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!