ನೂತನ ಇಓ ಚಂದ್ರಶೇಖರ್ ಕಂದಕೂರ ಅಧಿಕಾರ ಸ್ವೀಕಾರ

0
Spread the love

ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ: ಗಜೇಂದ್ರಗಡ ತಾಲೂಕು ಪಂಚಾಯಿತಿಗೆ ನೂತನ ಕಾರ್ಯ ನಿರ್ವಾಹಕ ಅಧಿಕಾರಿಯಾಗಿ ನೇಮಕಗೊಂಡಿರುವ ಚಂದ್ರಶೇಖರ್ ಬಿ. ಕಂದಕೂರ ಮಂಗಳವಾರ ಸ್ಥಳೀಯ ತಾ.ಪಂ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ನಿರ್ಗಮಿತ ಇಒ ಮಂಜುಳಾ ಹಕಾರಿ ಅವರಿಂದ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು.

Advertisement

ಅಧಿಕಾರ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಚಂದ್ರಶೇಖರ್ ಅವರು ಕಾರ್ಯೋತ್ಸಾಹ ತೋರಿಸಿ, ಗೋಗೇರಿ ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿದರು. ಶಾಲೆಯ ಬೋಧಕ ಹಾಗೂ ಮೂಲಭೂತ ಸೌಕರ್ಯಗಳ ಕುರಿತಾಗಿ ತಾತ್ಕಾಲಿಕವಾಗಿ ತಾ.ಪಂ ಕಚೇರಿಗೆ ಸಲ್ಲಿಸಿದ್ದ ಮನವಿಗೆ ಸ್ಪಂದಿಸಿದ ಇಒ, ಶಾಲೆಯ ಕೊಠಡಿಗಳ ಸ್ಥಿತಿಗತಿಯ ಪರಿಶೀಲನೆ ನಡೆಸಿ, ಶಿಕ್ಷಕರೊಂದಿಗೆ ಚರ್ಚಿಸಿದರು. ದುರಸ್ತಿ ಅಗತ್ಯವಿರುವ ಕೊಠಡಿಗಳ ಕುರಿತು ಸ್ಥಳದಲ್ಲಿಯೇ ಪರಿಶೀಲನೆ ನಡೆಸಿದ ಅವರು, ಮುಂದಿನ ಆರ್ಥಿಕ ವರ್ಷದಲ್ಲಿ ಆದ್ಯತೆಯ ಆಧಾರದಲ್ಲಿ ಅನುದಾನ ಮಂಜೂರಾತಿ ಮಾಡುವ ಭರವಸೆ ನೀಡಿದರು.

ಈ ಹಿಂದೆ ಶಿಕ್ಷಕರಾಗಿ ಸೇವೆ ಸಲ್ಲಿಸಿ ಅನುಭವವುಳ್ಳ ಚಂದ್ರಶೇಖರ್ ಕಂದಕೂರ ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಿ, ವಿದ್ಯೆಯ ಮಹತ್ವದ ಬಗ್ಗೆ ಸಲಹೆ ನೀಡಿ, ವಿದ್ಯಾರ್ಥಿಗಳ ಜೀವನ ಬಂಗಾರದAತೆ. ಇಂತಹ ಪ್ರಾಯದಲ್ಲಿ ಅಧ್ಯಯನವೇ ಪ್ರಮುಖ. ಬೇರೆ ವಿಚಾರಗಳಿಗೆ ಸಮಯ ವ್ಯಯಿಸದೆ, ಕಲಿಕೆಗೆ ಹೆಚ್ಚು ಸಮಯ ನೀಡಬೇಕು ಎಂದು ಮಾರ್ಗದರ್ಶನ ನೀಡಿದರು.

ಬಳಿಕ ವಿದ್ಯಾರ್ಥಿಗಳೊಂದಿಗೆ ಬಿಸಿಯೂಟವನ್ನು ಸೇವಿಸಿ, ಆಹಾರದ ಗುಣಮಟ್ಟ ಮತ್ತು ಅಡುಗೆಯ ರುಚಿಯ ಕುರಿತು ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ತಾ.ಪಂ ಉದ್ಯೋಗ ಖಾತ್ರಿ ಯೋಜನೆಯ ಸಹಾಯಕ ನಿರ್ದೇಶಕ ಬಸವರಾಜ ಬಡಿಗೇರ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕರು, ಶಾಲಾ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕ ವೃಂದ ಸೇರಿದಂತೆ ವಿದ್ಯಾರ್ಥಿಗಳು, ಗ್ರಾ.ಪಂ ಸಿಬ್ಬಂದಿಗಳು ಹಾಗೂ ನರೇಗಾ ಸಿಬ್ಬಂದಿಗಳು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here