HomeKarnataka News5 ವರ್ಷಗಳ ಬಳಿಕ ಕರ್ನಾಟಕಕ್ಕೆ ಹೊಸ ರಾಜ್ಯಪಾಲರು: ಸುಧಾ ಯಾದವ್‌ಗೆ ಹೊಣೆ

5 ವರ್ಷಗಳ ಬಳಿಕ ಕರ್ನಾಟಕಕ್ಕೆ ಹೊಸ ರಾಜ್ಯಪಾಲರು: ಸುಧಾ ಯಾದವ್‌ಗೆ ಹೊಣೆ

For Dai;y Updates Join Our whatsapp Group

ಬೆಂಗಳೂರು: ಸುಮಾರು ಐದು ವರ್ಷಗಳ ಬಳಿಕ ಕರ್ನಾಟಕದ ರಾಜ್ಯಪಾಲರನ್ನು ಬದಲಾವಣೆ ಮಾಡಲಾಗಿದೆ.

ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ಹೊಸ ರಾಜ್ಯಪಾಲರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಕ್ಟೋಬರ್ 12ರಂದು ಆದೇಶ ಹೊರಡಿಸಿದ್ದಾರೆ. ಮಾಜಿ ಸಂಸದೆ ಸುಧಾ ಯಾದವ್ ಅವರನ್ನು ಕರ್ನಾಟಕದ ನೂತನ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ ಎಂದು ವರದಿಯಾಗಿದೆ.

ರಾಜ್ಯಪಾಲರ ನೇಮಕಾತಿಯಲ್ಲಿ ಹಲವು ರಾಜ್ಯಗಳಿಗೆ ಹೊಸ ಜವಾಬ್ದಾರಿಗಳನ್ನು ಹಂಚಿಕೆ ಮಾಡಲಾಗಿದೆ. ಸಿಕ್ಕಿಂನ ರಾಜ್ಯಪಾಲರಾಗಿದ್ದ ಓಂ ಪ್ರಕಾಶ್ ಮಾಥುರ್ ಅವರನ್ನು ಕೇರಳದ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ಕೇರಳದ ರಾಜ್ಯಪಾಲರಾಗಿದ್ದ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರಿಗೆ ತಮಿಳುನಾಡಿನ ರಾಜ್ಯಪಾಲರ ಜವಾಬ್ದಾರಿ ನೀಡಲಾಗಿದೆ.

ಇನ್ನು ಬ್ರಜ್ ಮೋಹನ್ ರಾಮ್ ಅವರನ್ನು ಒಡಿಶಾದ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ. ಡಾ. ಧಲ್ ಸಿಂಗ್ ಬಿಸೆನ್ ಅವರನ್ನು ಉತ್ತರಾಖಂಡದ ರಾಜ್ಯಪಾಲರನ್ನಾಗಿ ಹಾಗೂ ದುಷ್ಯಂತ್ ಗೌತಮ್ ಅವರನ್ನು ಸಿಕ್ಕಿಂನ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ.

ರಾಷ್ಟ್ರಪತಿಗಳ ಈ ಆದೇಶದೊಂದಿಗೆ ಆರು ರಾಜ್ಯಗಳಲ್ಲಿ ರಾಜ್ಯಪಾಲರ ನೇಮಕಾತಿ ಮತ್ತು ವರ್ಗಾವಣೆ ಪ್ರಕ್ರಿಯೆ ನಡೆದಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img