ಹೊಸ GST ಕ್ರಮ: ಗಬ್ಬರ್ ಸಿಂಗ್ ದರೋಡೆಯ ಪ್ರಮಾಣವನ್ನು ಕಡಿಮೆ ಮಾಡಿದ್ದಾನೆ – ಪ್ರಿಯಾಂಕ್ ಖರ್ಗೆ ವ್ಯಂಗ್ಯ

0
Spread the love

ಬೆಂಗಳೂರು: ಗಬ್ಬರ್ ಸಿಂಗ್ ದರೋಡೆಯ ಪ್ರಮಾಣವನ್ನು ಕಡಿಮೆ ಮಾಡಿದ್ದಾನೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ್ದಾರೆ. ಇಂದಿನಿಂದ ಹೊಸ ಜಿಎಸ್‌ಟಿ ದರ ಜಾರಿಗೆ ಬಂದಿದ್ದು,  ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು, ಗಬ್ಬರ್ ಸಿಂಗ್ ದರೋಡೆಯ ಪ್ರಮಾಣವನ್ನು ಕಡಿಮೆ ಮಾಡಿದ್ದಾನೆ,

Advertisement

ಇದಕ್ಕಾಗಿ ಎಲ್ಲರೂ ಉತ್ಸವ ಆಚರಿಸಬೇಕು. ಈ ಗಬ್ಬರ್ ಸಿಂಗ್ 8 ವರ್ಷ ಮಾಡಿದ ಪೂರ್ಣ ಪ್ರಮಾಣದ ಲೂಟಿಯನ್ನು ಎಲ್ಲರೂ ಮರೆತುಬಿಡಬೇಕು. ಕೇಂದ್ರ ಸರ್ಕಾರದ ವರಸೆ ಇದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ದೇಶದ ಜನರನ್ನು ಹೇಗೆ ಬೇಕಾದರೂ ಮರಳು ಮಾಡಬಹುದಾದಷ್ಟು ಮೂರ್ಖರು ಎಂದು ಭ್ರಮಿಸಿದೆ ಬಿಜೆಪಿ. ಆದರೆ ಜನರು ಮೂರ್ಖರಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಈಗ “ಜಿಎಸ್‌ಟಿ ಉಳಿತಾಯ ಉತ್ಸವ” ಮಾಡಬೇಕಂತೆ, ಕಳೆದ 8 ವರ್ಷದಿಂದ ”GST ಲೂಟಿ ಉತ್ಸವ” ಮಾಡುತ್ತಿದ್ದರಲ್ಲವೇ? ಎಂದು ಪ್ರಶ್ನಿಸಿದರು.


Spread the love

LEAVE A REPLY

Please enter your comment!
Please enter your name here