HomeBengaluru Newsಕುಡಿಯುವ ನೀರಿನ ಬಳಕೆಗೆ ಹೊಸ ಮಾರ್ಗಸೂಚಿ! BWSSB ಯಿಂದ ಮಹತ್ವದ ಆದೇಶ

ಕುಡಿಯುವ ನೀರಿನ ಬಳಕೆಗೆ ಹೊಸ ಮಾರ್ಗಸೂಚಿ! BWSSB ಯಿಂದ ಮಹತ್ವದ ಆದೇಶ

For Dai;y Updates Join Our whatsapp Group

ಬೆಂಗಳೂರು: ಮಳೆ ಕೊರತೆಯಿಂದ ನಗರದ ಹಲವು ಭಾಗಗಳಲ್ಲಿ ಅಂತರ್ಜಲ ಮಟ್ಟ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಂರಕ್ಷಣೆಗೆ ಬೆಂಗಳೂರು ಜಲ ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಿದೆ.

ಬಿಡಬ್ಲ್ಯೂಎಸ್‌ಎಸ್‌ಬಿ ಕಾಯ್ದೆ-1964ರ ಕಲಂ 33 ಮತ್ತು 34ರಡಿ ಮೂರು ನಿಷೇಧಾತ್ಮಕ ಹಾಗೂ ನಿಯಂತ್ರಣ ಆದೇಶಗಳನ್ನು ಹೊರಡಿಸಲಾಗಿದ್ದು, ಜುಲೈ 31ರೊಳಗೆ ಅವುಗಳನ್ನು ಕಡ್ಡಾಯವಾಗಿ ಜಾರಿಗೆ ತರಲು ಸೂಚಿಸಲಾಗಿದೆ.

ಹೊಸ ಆದೇಶದ ಪ್ರಕಾರ, ಈಜುಕೊಳಗಳನ್ನು ತುಂಬಿಸಲು ಕುಡಿಯುವ ನೀರನ್ನು ಬಳಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಆದರೆ, ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಿಗೆ ತರಬೇತಿ ಪಡೆಯುವ ಕ್ರೀಡಾಪಟುಗಳಿಗಾಗಿ ಬಳಸುವ ಈಜುಕೊಳಗಳಿಗೆ ಮಂಡಳಿಯ ಪೂರ್ವಾನುಮತಿ ಪಡೆದಿದ್ದರೆ ಈ ನಿಯಮ ಅನ್ವಯಿಸುವುದಿಲ್ಲ.

ಇದರ ಜೊತೆಗೆ ವಾಹನ ತೊಳೆಯುವುದು, ಕಟ್ಟಡ ನಿರ್ಮಾಣ ಕಾಮಗಾರಿಗಳು, ಅಲಂಕಾರಿಕ ಕಾರಂಜಿಗಳು, ಸಿನಿಮಾ ಮಂದಿರಗಳು ಹಾಗೂ ಮಾಲ್‌ಗಳಲ್ಲಿ ಕುಡಿಯುವ ಉದ್ದೇಶವಲ್ಲದ ನೀರಿನ ಬಳಕೆ, ರಸ್ತೆ ನಿರ್ಮಾಣ ಹಾಗೂ ರಸ್ತೆ ಸ್ವಚ್ಛತಾ ಕಾಮಗಾರಿಗಳಿಗೆ ಕುಡಿಯುವ ನೀರನ್ನು ಬಳಸುವುದಕ್ಕೂ ನಿಷೇಧ ಹೇರಲಾಗಿದೆ.

ಅಪಾರ್ಟ್‌ಮೆಂಟ್‌ಗಳು, ವಾಣಿಜ್ಯ ಸಂಕೀರ್ಣಗಳು, ಮಾಲ್‌ಗಳು, ಸರ್ಕಾರಿ ಕಟ್ಟಡಗಳು, ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಹಾಗೂ ಧಾರ್ಮಿಕ ಸ್ಥಳಗಳಲ್ಲಿ ಸ್ವಚ್ಛತಾ ಉದ್ದೇಶಕ್ಕಾಗಿ ಬಳಸುವ ನಳಿಕೆಗಳು ಮತ್ತು ನೀರಿನ ಔಟ್‌ಲೆಟ್‌ಗಳಿಗೆ ಫ್ಲೋ ರಿಸ್ಟ್ರಿಕ್ಟರ್‌ಗಳು ಅಥವಾ ಏರೇಟರ್‌ಗಳನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದು ಮಂಡಳಿ ಸೂಚಿಸಿದೆ.

ನಗರದಲ್ಲಿ ಶಾಶ್ವತ ಹಾಗೂ ತಾತ್ಕಾಲಿಕ ನಿವಾಸಿಗಳನ್ನು ಸೇರಿಸಿ ಸುಮಾರು 1.4 ಕೋಟಿ ಜನಸಂಖ್ಯೆ ಇರುವುದರಿಂದ ಕುಡಿಯುವ ನೀರನ್ನು ಸಮಾನವಾಗಿ ಹಾಗೂ ವಿವೇಕಪೂರ್ವಕವಾಗಿ ಬಳಸುವುದು ಅಗತ್ಯವಾಗಿದೆ. ಕಡಿಮೆ ಮಳೆಯಿಂದ ನಗರದ ಕೆಲ ಪ್ರದೇಶಗಳಲ್ಲಿ ಅಂತರ್ಜಲ ಮಟ್ಟ ಕುಸಿದಿರುವ ಕಾರಣ ನೀರಿನ ವ್ಯರ್ಥ ಬಳಕೆಯನ್ನು ತಡೆಯಲು ಈ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು BWSSB ತಿಳಿಸಿದೆ.

ಜಲಾಶಯಗಳಲ್ಲಿನ ನೀರಿನ ಸಂಗ್ರಹವೂ ಗಣನೀಯವಾಗಿ ಕುಸಿದಿದೆ ಎಂದು BWSSB ಅಧ್ಯಕ್ಷೆ ಮಂಜುಳಾ ಎನ್. ತಿಳಿಸಿದ್ದಾರೆ. ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ, ಶನಿವಾರ ಸಂಜೆ ವೇಳೆಗೆ ಜಲಾಶಯಗಳಲ್ಲಿ ಕೇವಲ ಶೇ.23ರಷ್ಟು ನೀರು ಮಾತ್ರ ಸಂಗ್ರಹವಾಗಿದೆ. ಒಟ್ಟು 895.6 ಟಿಎಂಸಿ ಸಂಗ್ರಹ ಸಾಮರ್ಥ್ಯದಲ್ಲಿ ಸದ್ಯ 203 ಟಿಎಂಸಿ ನೀರು ಲಭ್ಯವಿದ್ದು, ಕಾವೇರಿ ಜಲಾನಯನ ಪ್ರದೇಶದ 114.5 ಟಿಎಂಸಿ ಸಾಮರ್ಥ್ಯಕ್ಕೆ ಹೋಲಿಸಿದರೆ ಕೇವಲ 36 ಟಿಎಂಸಿ ನೀರು ಮಾತ್ರ ಸಂಗ್ರಹವಾಗಿದೆ ಎಂದು ಅವರು ತಿಳಿಸಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img