ಬೆಂಗಳೂರು:- ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಗೆ ಹೊಸ ಟೆನ್ಷನ್ ಶುರುವಾಗಿದೆ.
Advertisement
ಎಸ್, ಪರಪ್ಪನ ಅಗ್ರಹಾರ ಜೈಲಿನಲ್ಲಿ ದಿನ ಕಳೆಯುತ್ತಿರೋ ದರ್ಶನ್ ಮತ್ತೆ ಬಳ್ಳಾರಿ ಜೈಲಿಗೆ ಶಿಫ್ಟ್ ಆಗೋ ಸಾಧ್ಯತೆ ಇದೆ. ಕಳೆದ ಬಾರಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ರೌಡಿಗಳ ಜೊತೆ ಸಂಪರ್ಕ ಬೆಳಸಿ ರಾಜಾತಿಥ್ಯ ಪಡೆದಿದ್ದಕ್ಕೆ ಸಾಕ್ಷಿ ಸಿಕ್ಕಿತ್ತು. ಸ್ಪೆಷಲ್ ಟ್ರೀಟ್ಮೆಂಟ್ ಕೊಡದಂತೆ ಸುಪ್ರೀಂ ಕೋರ್ಟ್ ಕೂಡ ಖಡಕ್ ವಾರ್ನಿಂಗ್ ನೀಡಿದ್ದು, ಈ ಬಾರಿಯೂ ಮತ್ತೆ ಅದೇ ರೀತಿ ಆಗಬಾರದೆಂದು ಅಧಿಕಾರಿಗಳು ಅಲರ್ಟ್ ಆಗಿದ್ದಾರೆ. ಈ ಹಿಂದೆ ಆದ ತಪ್ಪು ಮತ್ತೆ ಮರುಕಳಿಸದಂತೆ ನೋಡಿಕೊಳ್ಳಲು ಜೈಲಾಧಿಕಾರಿಗಳಿಗೆ ಸೂಚನೆ ಸಿಕ್ಕಿದೆ. ಇನ್ನೊಂದೆಡೆ ದರ್ಶನ್ನ ಮತ್ತೆ ಬಳ್ಳಾರಿಗೆ ಶಿಫ್ಟ್ ಮಾಡಲು ಕೋರ್ಟ್‌ಗೆ ಅರ್ಜಿ ಸಲ್ಲಿಸಲು ಜೈಲಾಧಿಕಾರಿಗಳು ಮುಂದಾಗಿದ್ದಾರೆ.