HomeSports Newsರೋಹಿತ್ ಶರ್ಮಾ ನಿವೃತ್ತಿ ವದಂತಿಗೆ ಹೊಸ ಟ್ವಿಸ್ಟ್: ಹಿಟ್ ಮ್ಯಾನ್ ಅಭಿಮಾನಿಗಳಿಗೆ ಸಿಗುತ್ತಾ ಸಿಹಿಸುದ್ದಿ?

ರೋಹಿತ್ ಶರ್ಮಾ ನಿವೃತ್ತಿ ವದಂತಿಗೆ ಹೊಸ ಟ್ವಿಸ್ಟ್: ಹಿಟ್ ಮ್ಯಾನ್ ಅಭಿಮಾನಿಗಳಿಗೆ ಸಿಗುತ್ತಾ ಸಿಹಿಸುದ್ದಿ?

For Dai;y Updates Join Our whatsapp Group

ಲಂಡನ್: ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ ಜುಲೈ 19ರಂದು ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ ಮೂರನೇ ಹಾಗೂ ಅಂತಿಮ ಪಂದ್ಯವೇ ಟೀಂ ಇಂಡಿಯಾ ಸ್ಟಾರ್ ಬ್ಯಾಟರ್ ರೋಹಿತ್ ಶರ್ಮಾ ಅವರ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನದ ಕೊನೆಯ ಪಂದ್ಯವಾಗಬಹುದು ಎಂಬ ವದಂತಿಗೆ ಇದೀಗ ಹೊಸ ತಿರುವು ಸಿಕ್ಕಿದೆ.

ರೋಹಿತ್ ಶರ್ಮಾ ಅವರು ತಮ್ಮ ನಿವೃತ್ತಿ ಕುರಿತು ಬಿಸಿಸಿಐ, ತಂಡದ ಆಡಳಿತ ಮಂಡಳಿ ಅಥವಾ ಆಯ್ಕೆ ಸಮಿತಿಗೆ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ ಎಂದು ವರದಿಯಾಗಿದೆ. ಹೀಗಾಗಿ ಲಾರ್ಡ್ಸ್‌ನಲ್ಲಿ ನಡೆಯಲಿರುವ ಪಂದ್ಯ ಮುಗಿದ ಬಳಿಕ ಅವರು ನಿವೃತ್ತಿ ಘೋಷಿಸಲಿದ್ದಾರೆ ಎಂಬ ಸುದ್ದಿಗೆ ಈವರೆಗೆ ಯಾವುದೇ ಅಧಿಕೃತ ದೃಢೀಕರಣ ಲಭ್ಯವಾಗಿಲ್ಲ.

ಇತ್ತೀಚಿನ ವರದಿಗಳ ಪ್ರಕಾರ, 2027ರ ಏಕದಿನ ವಿಶ್ವಕಪ್ ಯೋಜನೆಯಲ್ಲಿ ರೋಹಿತ್ ಶರ್ಮಾ ಅವರನ್ನು ಪರಿಗಣಿಸದಿರಲು ಆಯ್ಕೆ ಸಮಿತಿ ನಿರ್ಧರಿಸಿದ್ದು, ಈ ವಿಚಾರವನ್ನು ಅವರಿಗೆ ಈಗಾಗಲೇ ತಿಳಿಸಲಾಗಿದೆ ಎನ್ನಲಾಗಿದೆ. ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ವಿಶ್ವಕಪ್‌ನ್ನು ಗಮನದಲ್ಲಿಟ್ಟುಕೊಂಡು ಯುವ ಆಟಗಾರರಿಗೆ ಹೆಚ್ಚಿನ ಅವಕಾಶ ನೀಡುವ ಉದ್ದೇಶದಿಂದ ತಂಡದ ಆಡಳಿತ ಮತ್ತು ಆಯ್ಕೆ ಸಮಿತಿ ಭವಿಷ್ಯದ ಯೋಜನೆ ರೂಪಿಸುತ್ತಿದೆ ಎಂದು ವರದಿಗಳು ಹೇಳಿವೆ.

ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿ ಆರಂಭಕ್ಕೂ ಮುನ್ನವೇ ಈ ಕುರಿತು ರೋಹಿತ್ ಶರ್ಮಾ ಅವರೊಂದಿಗೆ ಚರ್ಚೆ ನಡೆದಿತ್ತು ಎನ್ನಲಾಗುತ್ತಿದೆ. ಆದರೆ, ಅವರು ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್ ಭವಿಷ್ಯದ ಬಗ್ಗೆ ಯಾವುದೇ ಅಂತಿಮ ನಿರ್ಧಾರವನ್ನು ಬಿಸಿಸಿಐ ಅಥವಾ ಆಯ್ಕೆ ಸಮಿತಿಗೆ ತಿಳಿಸಿಲ್ಲ ಎಂದು ವರದಿಯಾಗಿದೆ.

ಪ್ರಸ್ತುತ ನಡೆಯುತ್ತಿರುವ ಏಕದಿನ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ರೋಹಿತ್ ಶರ್ಮಾ ಕ್ರಮವಾಗಿ 11 ಮತ್ತು 26 ರನ್ ಗಳಿಸಿದ್ದಾರೆ. ಅವರ ಬ್ಯಾಟಿಂಗ್ ಪ್ರದರ್ಶನ ನಿರೀಕ್ಷಿತ ಮಟ್ಟದಲ್ಲಿರದ ಹಿನ್ನೆಲೆಯಲ್ಲಿ, ಜುಲೈ 19ರಂದು ಲಾರ್ಡ್ಸ್‌ನಲ್ಲಿ ನಡೆಯಲಿರುವ ಮೂರನೇ ಏಕದಿನ ಪಂದ್ಯವೇ ಅವರ ಕೊನೆಯ ಪಂದ್ಯವಾಗಬಹುದು ಎಂಬ ಊಹಾಪೋಹಗಳು ಮತ್ತಷ್ಟು ಜೋರಾಗಿವೆ.

ಆದಾಗ್ಯೂ, ರೋಹಿತ್ ಶರ್ಮಾ ನಿವೃತ್ತಿ ಘೋಷಿಸಲಿದ್ದಾರೆ ಎಂಬ ಸುದ್ದಿಗೆ ಇನ್ನೂ ಅಧಿಕೃತ ಸ್ಪಷ್ಟನೆ ಸಿಕ್ಕಿಲ್ಲ. ಹೀಗಾಗಿ ಲಾರ್ಡ್ಸ್ ಪಂದ್ಯಕ್ಕೂ ಮುನ್ನ ಅಥವಾ ಪಂದ್ಯದ ಬಳಿಕ ರೋಹಿತ್ ತಮ್ಮ ಭವಿಷ್ಯದ ಕುರಿತು ಯಾವುದೇ ನಿರ್ಧಾರ ಪ್ರಕಟಿಸುತ್ತಾರೆಯೇ ಎಂಬುದು ಸದ್ಯ ಕುತೂಹಲ ಮೂಡಿಸಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img