ಬೆಂಗಳೂರು: ಹೊಸ ವರ್ಷ ಸಂಭ್ರಮಾಚರಣೆಗೆ ಕೌಂಟ್‌ಡೌನ್ ಶುರುವಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಹೊಸ ವರ್ಷದ ಸ್ವಾಗತಕ್ಕೆ ಸಿದ್ಧತೆಗಳು ನಡೆದಿವೆ. ಬೆಂಗಳೂರಿನಲ್ಲಿ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಪಡೆ ಹದ್ದಿನ ಕಣ್ಣಿಟ್ಟಿದೆ.
ಈ ಹಿನ್ನಲೆಯಲ್ಲಿ ಪೊಲೀಸರು ಬಹಳ ಜನ ಮಫ್ತಿಯಲ್ಲಿ ಇರುತ್ತಾರೆ. ಏನಾದರೂ ಘಟನೆ ಆದರೆ ತಕ್ಷಣ ಕ್ರಮ ವಹಿಸಲು ಪೊಲೀಸರು ಸಿದ್ಧವಾಗಿದ್ದಾರೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ರಾಜ್ಯದ ಜನತೆಗೆ ಹೊಸ ವರ್ಷದ ಶುಭ ಕಾಮನೆಗಳು. ವೈಯಕ್ತಿಕವಾಗಿ ಹಾಗೂ ಸರ್ಕಾರದ ಪರವಾಗಿ ಶುಭಾಶಯಗಳು. ಎಲ್ಲರಿಗೂ ಹರ್ಷ ತರಲಿ, ಶಾಂತಿ ಸುಖ ನೆಮ್ಮದಿ ಎಲ್ಲರಿಗೂ ಸಿಗಲಿ. ನಾವು ಗೃಹ ಇಲಾಖೆಯಿಂದ ಎಲ್ಲ ರೀತಿಯ ಅಗತ್ಯ ಕ್ರಮ ತಗೊಂಡಿದ್ದೇವೆ. ಅಹಿತಕರ ಘಟನೆ ಆಗಬಾರದು ಎಂಬುದು ನಮ್ಮ ಉದ್ದೇಶ ಎಂದರು.
ಇನ್ನೂ ಡ್ರಗ್ಸ್ ನಿಯಂತ್ರಣಕ್ಕೆ ಕ್ರಮ ವಹಿಸಿದ್ದೇವೆ. ಕಳೆದೊಂದೂವರೆ ತಿಂಗಳಿಂದ ಕಾರ್ಯಾಚರಣೆ ಚುರುಕು ಮಾಡಿದ್ದೇವೆ. ಹೊಸ ವರ್ಷ, ಕ್ರಿಸ್ಮಸ್ ಅಂತ ಡ್ರಗ್ಸ್ ಪೂರೈಕೆ ಹೆಚ್ಚಾಗಿರುತ್ತದೆ. ಹೀಗಾಗಿ ನಾವು ಕಟ್ಟೆಚ್ಚರ ವಹಿಸಿದ್ದೇವೆ. ಕಳೆದೊಂದು ತಿಂಗಳಿಂದ ನಾವು ಡ್ರೈವ್ ಮಾಡಿ ನಿಯಂತ್ರಣ ಮಾಡ್ತಿದ್ದೇವೆ ಎಂದು ಹೇಳಿದರು.