ನ್ಯೂ ಇಯರ್ ಸಂಭ್ರಮ: ನಂದಿ ಬೆಟ್ಟಕ್ಕೆ ಪ್ರವಾಸಿಗರ ದಂಡು, ಫುಲ್ ಟ್ರಾಫಿಕ್!

0
Spread the love

ಚಿಕ್ಕಬಳ್ಳಾಪುರ:- 2025ರ ಹೊಸವರ್ಷವನ್ನು ಕರ್ನಾಟಕದ ಜನ ಅದ್ದೂರಿಯಾಗಿ ಬರಮಾಡಿಕೊಂಡಿದ್ದಾರೆ. ರಾಜಧಾನಿ ಬೆಂಗಳೂರು ಸೇರಿ ಕರ್ನಾಟಕದಾದ್ಯಂತ ಮಧ್ಯರಾತ್ರಿಯಿಂದ ಸಂಭ್ರಮ, ಸಡಗರ ಜೋರಾಗಿತ್ತು.

Advertisement

ಈ ಮೂಲಕ ಹೊಸ ವರ್ಷ 2025ಕ್ಕೆ ಭರ್ಜರಿ ಸ್ವಾಗತ ಸಿಕ್ಕಂತಾಗಿದೆ. ಇನ್ನೂ ನ್ಯೂ ಇಯರ್ ಸಂಭ್ರಮಾಚರಣೆಗಾಗಿ ನಂದಿಗಿರಿಧಾಮಕ್ಕೆ ಪ್ರವಾಸಿಗರು ಲಗ್ಗೆ ಇಟ್ಟಿದ್ದಾರೆ.

ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾದ ನಂದಿ ಬೆಟ್ಟಕ್ಕೆ ದಂಡು ದಂಡಾಗಿ ಪ್ರವಾಸಿಗರು ಆಗಮಿಸಿದರು. ಪರಿಣಾಮ ನಂದಿ ಬೆಟ್ಟದ ಕ್ರಾಸ್‌ನಲ್ಲೇ ಭಾರೀ ಟ್ರಾಫಿಕ್ ಜಾಮ್ ಉಂಟಾಯಿತು.

ಕಾರು ಹಾಗೂ ಬೈಕ್‌ಗಳಲ್ಲಿ ನಂದಿ ಬೆಟ್ಟಕ್ಕೆ ಪ್ರವಾಸಿಗರು ಲಗ್ಗೆ ಇಟ್ಟರು. ಬೆಳಗ್ಗೆ 7 ಗಂಟೆಗೆ ಚೆಕ್‌ಪೋಸ್ಟ್ ತೆರೆದಿದ್ದೇ ತಡ ನಾ ಮುಂದು ತಾ ಮುಂದು ಅಂತ ಆಗಮಿಸಿದರು.

ಇನ್ನೂ ಎಲ್ಲೆಲ್ಲೂ ಹೊಸ ವರ್ಷದ ಸಂಭ್ರಮ ಮನೆ ಮಾಡಿದ್ದು, ಬೆಂಗಳೂರಿನಲ್ಲಿ ಮಧ್ಯರಾತ್ರಿ 12 ಗಂಟೆಗೆ ಗ್ರ್ಯಾಂಡ್‌ ವೆಲ್‌ಕಮ್ ಕೋರಲಾಯಿತು.


Spread the love

LEAVE A REPLY

Please enter your comment!
Please enter your name here