ಹೊಸವರ್ಷದ ಮೋಜು ಮಸ್ತಿ: ವರ್ಷದ ಕೊನೆ ದಿನ 2.5 ಕೋಟಿ ಮೌಲ್ಯದ ಡ್ರಗ್ಸ್ ಸೀಜ್ ಮಾಡಿದ CCB!

0
Spread the love

ಬೆಂಗಳೂರು:- ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ವರ್ಷದ ಕೊನೆ ದಿನ ಭಾರೀ ಪ್ರಮಾಣದ ಡ್ರಗ್ಸ್ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

Advertisement

ನಗರದ ಹಲವು ಕಡೆಗಳಲ್ಲಿ ಪಾರ್ಟಿ, ಮೋಜು ಮಸ್ತಿ ನಡೆದಿವೆ. ಆದರೆ, ಈ ಪಾರ್ಟಿಗಳಿಗೆ ಪೂರೈಕೆ ಆಗಬೇಕಿದ್ದ ಸುಮಾರು ಎರಡುವರೆ ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಅನ್ನು ವಶಪಡಿಸಿಕೊಳ್ಳುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಸಿಲಿಕಾನ್ ಸಿಟಿ ಬೆಂಗಳೂರಿನ ಮೂಲೆ ಮೂಲೆಯಲ್ಲಿ ಹೊಸ ವರ್ಷದ ಪಾರ್ಟಿ ನಡೆಯುವುದು ಕಾಮನ್. ಹುಡುಗರಿಂದ ತೊಡಗಿ ಹಣ್ಣು ಹಣ್ಣು ಮುದುಕರ ವರೆಗೆ ಅವರದೇ ಆದ ರೀತಿಯಲ್ಲಿ ಪಾರ್ಟಿ ಮಾಡುತ್ತಾರೆ. ಆದರೆ ಪಾರ್ಟಿಯಲ್ಲಿ ಮದ್ಯ ಮಾತ್ರವಲ್ಲದೆ ಒಂದಷ್ಟು ಜನರು ಡ್ರಗ್ಸ್​​ಗೆ ಮಾರು ಹೋಗುತ್ತಾರೆ. ಅಂತಹವರಿಗೆ ಮಾರಾಟ ಮಾಡಲು ಅಂತ ಥೈಲ್ಯಾಂಡ್​ನಿಂದ ತರಿಸಿದ್ದ ಹೈಡ್ರೋ ಗಾಂಜಾವನ್ನು ಬೆಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರಕ್ಷಿತ್ ರಮೇಶ್ ಎಂಬಾತನನ್ನು ವಶಕ್ಕೆ ಪಡೆದ ಸಿಸಿಬಿ ಅಧಿಕಾರಿಗಳು, ಆತನ ಸಂಪಿಗೆಹಳ್ಳಿಯ ಮನೆಯಲ್ಲಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಆತ ಬೆಂಗಳೂರಿನ ಪಾರ್ಟಿಗಳಿಗೆ ಪೂರೈಕೆ ಮಾಡಲು ತರಿಸಿದ್ದ ಬರೋಬ್ಬರಿ ಹದಿನಾರು ಕೆಜಿ ಗಾಂಜಾ ಸೊಪ್ಪು ಮತ್ತು ಥೈಲ್ಯಾಂಡ್​​ನಿಂದ ತರಿಸಿದ್ದ ಸುಮಾರು ಮೂರು
ಕೆಜಿ ಹೈಡ್ರೋ ಗಾಂಜಾ ದೊರೆತಿದೆ. ಎಂಡಿಎಂಎ, ಎಲ್​ಎಸ್​ಡಿ ಮತ್ತು ಚರಸ್ ಎಲ್ಲ ಸೇರಿ ಸುಮಾರು 2.5 ಕೋಟಿ ರೂ. ಮೌಲ್ಯದ ಡ್ರಗ್ಸ್ ಅನ್ನು ವಶಕ್ಕೆ ಪಡೆದಿದ್ದಾರೆ.


Spread the love

LEAVE A REPLY

Please enter your comment!
Please enter your name here