HomeKarnataka Newsಕೀಟನಾಶಕ ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನ: ಚಿಕಿತ್ಸೆ ಫಲಿಸದೇ ನವವಿವಾಹಿತೆ ಸಾವು!

ಕೀಟನಾಶಕ ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನ: ಚಿಕಿತ್ಸೆ ಫಲಿಸದೇ ನವವಿವಾಹಿತೆ ಸಾವು!

For Dai;y Updates Join Our whatsapp Group

Spread the love

ಬೆಳಗಾವಿ:- ಕೀಟನಾಶಕ ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ್ದ ನವವಿವಾಹಿತೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಬೈಲಹೊಂಗಲ‌ ತಾಲೂಕಿನ ಇಂಚಲ ಗ್ರಾಮದಲ್ಲಿ ಜರುಗಿದೆ.

ಮೃತ ಮಹಿಳೆಯನ್ನು 22 ವರ್ಷದ ಮಂಜುನಾಥ ಹೂಗಾರ ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಲಕ್ಷ್ಮಿ ಕೀಟನಾಶಕ ಮಾತ್ರೆಗಳನ್ನು ನುಂಗಿದ್ದಾಳೆ. ಇದರಿಂದ ಅಸ್ವಸ್ಥರಾಗಿದ್ದ ಅವರನ್ನು ಕುಟುಂಬಸ್ಥರು ಮೊದಲು ಬೈಲಹೊಂಗಲದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರು. ಆದರೆ ಹೆಚ್ಚಿನ ಚಿಕಿತ್ಸೆ ಬೇಕಿದ್ದರಿಂದ ಲಕ್ಷ್ಮಿಯನ್ನು ಅಲ್ಲಿಂದ ಬೆಳಗಾವಿಯ ಬಿಮ್ಸ್ ಆಸ್ಪತ್ರೆ ದಾಖಲು ಮಾಡಲಾಗಿತ್ತು. ಆದರೆ ದುರಾದೃಷ್ಟವಶಾತ್ ಚಿಕಿತ್ಸೆ ಫಲಿಸದೇ ಇದೀಗ ಸಾವನ್ನಪ್ಪಿದ್ದಾರೆ.

ಸದ್ಯ ಈ ಸುದ್ದಿ ತಿಳಿಯುತ್ತಿದ್ದಂತೆ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!