ಮುಂದಿನ ಸಿಎಂ ಲಕ್ಷ್ಮೀ ಹೆಬ್ಬಾಳಕರ್!? ಅಭಿಮಾನಿಗಳಿಂದ ವೈರಲ್ ಆಯ್ತು ಪೋಸ್ಟ್!?

0
Spread the love

ಬೆಂಗಳೂರು:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕುರಿತು ತೀವ್ರ ಚರ್ಚೆಗಳು ನಡೆಯುತ್ತಿರುವ ಹೊತ್ತಿನಲ್ಲಿ, ಕಳೆದ ತಿಂಗಳು ಕೋಡಿಮಠ ಶ್ರೀಗಳು ನುಡಿದಿರುವ ಭವಿಷ್ಯವೊಂದು ತೀವ್ರ ವೈರಲ್ ಆಗ್ತಾ ಇದೆ.

Advertisement

ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಬದಲಾವಣೆಗೆ ವಿರೋಧ ಪಕ್ಷಗಳು ಆಗ್ರಹಿಸುತ್ತಾ ಬಂದಿವೆ. ಇದರ ಬೆನ್ನಲ್ಲೆ ಆಗಸ್ಟ್ ತಿಂಗಳಲ್ಲಿ ಮಾತನಾಡಿದ್ದ ಕೋಡಿಮಠದ ಶಿವಾನಂದ ಶಿವಯೋಗಿ ಸ್ವಾಮೀಜಿಗಳು ಒಂದು ಭವಿಷ್ಯವನ್ನು ನುಡಿದಿದ್ದರು. ರಾಜ್ಯದಲ್ಲಿ ಮುಂದಿನ ಸಿಎಂ ಮಹಿಳೆ ಆಗುತ್ತಾರೆ ಎಂದು ಭವಿಷ್ಯ ನುಡಿದಿದ್ದರು ಸದ್ಯ ಈ ಭವಿಷ್ಯ ತೀವ್ರ ಸಂಚಲನ ಮೂಡಿಸಿದೆ.

ಸದ್ಯ ಈ ಭವಿಷ್ಯವನ್ನೇ ಮುಂದಿಟ್ಟುಕೊಂಡು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಮುಂದಿನ ಸಿಎಂ ಲಕ್ಷ್ಮೀ ಹೆಬ್ಬಾಳಕರ್ ಎಂದು ಪೋಸ್ಟರ್ ಅನ್ನು ಹರಿ ಬಿಟ್ಟಿದ್ದಾರೆ. ಆ ಮೂಲಕ ಮಹಿಳಾ ಸಿಎಂ ಕೂಗು ಗಟ್ಟಿಯಾಗಿದೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾಗಿರುವ ಲಕ್ಷ್ಮೀ ಹೆಬ್ಬಾಳ್ಕರ್ ಅವರು ರಾಜ್ಯದ ಮುಂದಿನ ಸಿಎಂ ಆಗಬೇಕು. ಈ ಅರ್ಹತೆಯನ್ನು ಅವರು ಹೊಂದಿದ್ದಾರೆ. ಈ ಮೂಲಕ ಲಕ್ಷ್ಮೀ ಹೆಬ್ಬಾಳಕರ್ ರಾಜ್ಯದ ಮೊದಲ ಮಹಿಳಾ ಮುಖ್ಯಮಂತ್ರಿ ಆಗಲಿ ಎಂಬ ಪೋಸ್ಟರ್ ಗಳು ಫೇಸ್ ಬುಕ್ ಹಾಗೂ ವಾಟ್ಸಪ್ ಗಳಲ್ಲಿ ಲಕ್ಷ್ಮೀ ಬೆಂಬಲಿಗರು ಹರಿಯಬಿಡುತ್ತಿದ್ದಾರೆ.


Spread the love

LEAVE A REPLY

Please enter your comment!
Please enter your name here