ಪಾಕಿಸ್ತಾನದ ಪರ ಬೇಹುಗಾರಿಕೆ ಆರೋಪ: CRPF ಸಿಬ್ಬಂದಿ ಬಂಧಿಸಿದ NIA

0
Spread the love

ನವದೆಹಲಿ: ಪಾಕಿಸ್ತಾನದ ಪರ ಬೇಹುಗಾರಿಕೆ ನಡೆಸಿದ ಆರೋಪದಡಿ ಬಂಧಿತರಾಗಿರುವ ಹರಿಯಾಣದ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಈಗಾಗಲೇ ಜೈಲಿನಲ್ಲಿದ್ದಾರೆ. ಇದೀಗ ಕೇಂದ್ರ ಮೀಸಲು ಪಡೆ ಸಿಬ್ಬಂದಿಯೊಬ್ಬರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಬಂಧಿಸಿದೆ. ಬಂಧಿತ ಆರೋಪಿಯನ್ನ ಮೋತಿ ರಾಮ್ಜಾಟ್ಎಂದು ಗುರುತಿಸಲಾಗಿದೆ.

Advertisement

ಬಂಧಿಸಲ್ಪಟ್ಟ ಸಿಆರ್ಪಿಎಫ್ಸಿಬ್ಬಂದಿಯನ್ನ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಪಹಲ್ಗಾಮ್ನಲ್ಲಿ 26 ಮಂದಿಯ ನರಮೇಧ ನಡೆಯುವುದಕ್ಕೆ 6 ದಿನಗಳ ಮುಂಚೆ ಅವರನ್ನ ಅಲ್ಲಿಗೆ ವರ್ಗಾತಿಸಲಾಗಿತ್ತು ಎಂದು ವರದಿಗಳು ತಿಳಿಸಿವೆ.

ಈತ 2023 ರಿಂದ ಪಾಕಿಸ್ತಾನ ಗುಪ್ತಚರ ಅಧಿಕಾರಿಗಳೊಂದಿಗೆ (ಪಿಐಒ) ಬೇಹುಗಾರಿಕೆ ಚಟುವಟಿಕೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ.

ಮತ್ತು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಸೂಕ್ಷ್ಮ ವಿಚಾರಗಳನ್ನು ಹಂಚಿಕೊಳ್ಳುತ್ತಿದ್ದ. ಅದಕ್ಕಾಗಿ ಪಾಕಿಸ್ತಾನಿ ಅಧಿಕಾರಿಗಳಿಂದ ಬಹು ಮಾರ್ಗಗಳ ಮೂಲಕ ಹಣ ಪಡೆಯುತ್ತಿದ್ದ ಎಂದು ಎನ್ಐಎ ಅಧಿಕಾರಿಗಳು ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here