ಬೆಂಗಳೂರು: ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಡ್ರಗ್ ಸಪ್ಲೈ ಮಾಡುತ್ತಿದ್ದ ನೈಜೀರಿಯನ್ ಪ್ರಜೆಯನ್ನು ಅರೆಸ್ಟ್ ಮಾಡಿದ್ದಾರೆ. ಕೌಸಾಕಿ ಜೂಲ್ಸ್ ಎನ್ ಹುಸೇನ್ ಬಂಧಿತ ಆರೋಪಿಯಾಗಿದ್ದು,
Advertisement
ಬೆಂಗಳೂರಿನಲ್ಲಿ ಒಂದು ಗ್ರಾಂ ಎಂಡಿಎಂಎ ಕ್ರಿಸ್ಟಲ್ ಗೆ 15000 ಸಾವಿರಕ್ಕೆ ಎಂಬಂತೆ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇನ್ನು ಬಂಧಿತ ಆರೋಪಿಯಿಂದ 515 ಗ್ರಾಂ ಎಂಡಿಎಂಎ ಕ್ರಿಸ್ಟಲ್ ವಶಕ್ಕೆ ಪಡೆದಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.