ಬೆಂಗಳೂರು:- ಬೆಂಗಳೂರು ಹೊರವಲಯದ ಆನೇಕಲ್ ನಲ್ಲಿ ಜರುಗಿದ ಮದ್ದೂರು ಜಾತ್ರೆಯಲ್ಲಿ ಅವಘಡ ಒಂದು ಸಂಭವಿಸಿದೆ. ಜಾತ್ರೆಯಲ್ಲಿ ತೇರುಗಳು ದಿಢೀರ್ ಧರೆಗುರುಳಿದ್ದು, ಪರಿಣಾಮ ಓರ್ವ ದಾರುಣ ಸಾವನ್ನಪ್ಪಿದ್ದಾರೆ.
ಜಾತ್ರೆಗೆ ಗ್ರಾಮಗಳಿಂದ 150 ಕ್ಕೂ ಹೆಚ್ಚು ಅಡಿ ಎತ್ತರದ ಕುರ್ಜುಗಳು ಆಗಮಿಸಿದ್ದವು. ತೇರು ಎಳೆದು ತರುವ ಸಂದರ್ಭದಲ್ಲಿ ಅವಘಡ ಸಂಭವಿಸಿದೆ.
ಮದ್ದೂರಮ್ಮ ಜಾತ್ರೆಗೆ ನೂರಾರು ವರ್ಷಗಳ ಇತಿಹಾಸವಿದೆ. ಟ್ರ್ಯಾಕ್ಟರ್ ಹಾಗೂ ನೂರಾರು ಎತ್ತುಗಳ ಮೂಲಕ ಎಳೆದು ತರುವ ಹೆಸರಾಂತ ಜಾತ್ರೆ ಇದು. ಪ್ರತಿಷ್ಟೆಗೆ ಅತೀ ಎತ್ತರ ತೇರು ಕಟ್ಟಿ ಎಳೆದು ತರುವ ಜಾತ್ರೆ ನೋಡಲು ಲಕ್ಷಾಂತರ ಜನ ಆಗಮಿಸುತ್ತಿದ್ದರು. ಗಾಳಿ ಸಹಿತ ಮಳೆಯಿಂದಾಗಿ ಆಯತಪ್ಪಿ ತೇರು ಬಿದ್ದಿದೆ.
ತೇರಿನಲ್ಲಿ ಇದ್ದ ಹಲವರಿಗೆ ಗಾಯಗಳಾಗಿವೆ. ಕಳೆದ ವರ್ಷ ಹೀಲಲಿಗೆ ತೇರು ಬಿದ್ದಿತ್ತು. ಇಂದು ಗಾಳಿ ಮಳೆ ಹೆಚ್ಚಾಗಿ ಸುರಿದ ಹಿನ್ನೆಲೆ ಅವಘಡ ಸಂಭವಿಸಿದೆ.



