ಬೆಂಗಳೂರು: ಬೀದರ್ ಮತ್ತು ಶಿವಮೊಗ್ಗದಲ್ಲಿ ನಡೆದಿದ್ದ ಜನಿವಾರ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಪ್ರತಿಯೊಬ್ಬರು ಜಾತಿ ಧರ್ಮದ ನಂಬಿಕೆ ಗೌರವಿಸುವುದನ್ನು ಕಲಿಯಬೇಕು. ಜನಿವಾರ ಹಾಕಿದ್ದಕ್ಕೆ ಪರೀಕ್ಷೆಗೆ ಕೂರಿಸದೇ ಇರುವುದು ಸರಿಯಲ್ಲ. ಈ ಘಟನೆಯನ್ನು ನಾನು ಖಂಡಿಸುತ್ತೇನೆ. ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಎಚ್ಚರಿಕೆ ವಹಿಸಬೇಕು ಎಂದರು.
ಜನಿವಾರ ಹಾಕಿಕೊಂಡು ಕಾಪಿ ಹೊಡೆಯೋಕೆ ಆಗುತ್ತಾ? ಜನಿವಾರದಲ್ಲಿ ಕಾಪಿ ಚೀಟಿ ಇಟ್ಟುಕೊಂಡು ಹೋಗೋಕೆ ಆಗುತ್ತಾ? ಜನಿವಾರ ಇದ್ದರೆ ಏನು ಸಮಸ್ಯೆ? ಸ್ಮಾರ್ಟ್ ವಾಚ್ ಕಟ್ಟಿಕೊಂಡು ಬಂದರೆ ನೀವು ತೆಗೆಸಬೇಕು ಎನ್ನುವುದು ಸರಿ. ಆದರೆ ಜನಿವಾರ ತೆಗೆದು ಒಂದು ಸಮುದಾಯಕ್ಕೆ ಅವಮಾನ ಮಾಡೋದು ಸರಿಯಲ್ಲ. ಈ ಘಟನೆ ಬಗ್ಗೆ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಅವರಿಗೆ ಬುದ್ದಿವಾದ ಹೇಳಬೇಕು. ಮುಂದೆ ಇಂತಹ ಘಟನೆ ಆಗದಂತೆ ಕ್ರಮ ವಹಿಸಬೇಕು ಎಂದು ನಿಖಿಲ್ ಕುಮಾರಸ್ವಾಮಿ ಅವರು ತಿಳಿಸಿದರು



