BREAKING.. ಚನ್ನಪಟ್ಟಣದಲ್ಲಿ NDA ಅಭ್ಯರ್ಥಿಯಾಗಿ ನಿಖಿಲ್‌ ಕುಮಾರಸ್ವಾಮಿ ಸ್ಪರ್ಧೆ ಫಿಕ್ಸ್!

0
Spread the love

ಬೆಂಗಳೂರು: ರಾಜ್ಯದ ಮೂರು ಉಪ ಚುನಾವಣೆಗಳ ಪೈಕಿ ಹೈವೋಲ್ಟೇಜ್ ಕ್ಷೇತ್ರವಾಗಿರುವ ಚನ್ನಪಟ್ಟಣ ಕ್ಷೇತ್ರದತ್ತ ಇದೀಗ ಎಲ್ಲ ಚಿತ್ತ ನೆಟ್ಟಿದೆ. ಈವರೆಗೂ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಯಾರು ಕಣಕ್ಕೆ ಇಳಿಯಬೇಕು ಎನ್ನುವುದು ಪ್ರಶ್ನೆಯಾಗಿತ್ತು, ಇದೀಗ ಅದಕ್ಕೆ ತೆರೆಬಿದ್ದಿದೆ.

Advertisement

ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್‌ ಕುಮಾರಸ್ವಾಮಿಯನ್ನು ಜೆಡಿಎಸ್‌ ಕಣಕ್ಕೆ ಇಳಿಸಿದೆ. ಪಕ್ಷದ ಕಚೇರಿ ಜೆಪಿ ಭವನದಲ್ಲಿ ಹೆಚ್‌ಡಿ ಕುಮಾರಸ್ವಾಮಿ  ನೇತೃತ್ವದಲ್ಲಿ ಜೆಡಿಎಸ್‌ ನಾಯಕರ ಜೊತೆ ನಡೆಸಿದ ಸಭೆಯ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ.  ಸಭೆಯಲ್ಲಿ ಮಾತನಾಡಿದ ಮಾಜಿ ಪ್ರಧಾನಿ ಹೆಚ್‌ಡಿದೇವೇಗೌಡ, ಕಾರ್ಯಕರ್ತರ ಒತ್ತಡಕ್ಕೆ ಮಣಿದು ನಿಖಿಲ್ ಸ್ಪರ್ಧೆ ಮಾಡುತ್ತಿದ್ದಾರೆ.

ಕಾಂಗ್ರೆಸ್ ಅವರಿಗೆ ಕುಮಾರಸ್ವಾಮಿಯನ್ನ ಹೇಗಾದ್ರು ಮುಗಿಸಬೇಕು ಅಂತ ಇದೆ.ಚನ್ನಪಟ್ಟಣದ ಕಾರ್ಯಕರ್ತರು, ಜನರು ಇದಕ್ಕೆ ಉತ್ತರ ಕೊಡಬೇಕು. ನಾನೇ ಚನ್ನಪಟ್ಟಣಕ್ಕೆ ಬಂದು ‌ಪ್ರಚಾರ ಮಾಡುತ್ತೇನೆ ಎಂದು ತಿಳಿಸಿದರು.  ಜೆಡಿಎಸ್ ವರಿಷ್ಠರು ಕಾರ್ಯಕರ್ತರ ಒತ್ತಡಕ್ಕೆ ಮಣಿದು ನಿಖಿಲ್ ಅವರನ್ನ ಮತ್ತೊಂದು ಅಗ್ನಿಪರೀಕ್ಷೆಯ ಕಣಕ್ಕಿಳಿಸಲು ರೆಡಿಯಾಗಿದ್ದಾರೆ ಎನ್ನಲಾಗಿದೆ.

 

 


Spread the love

LEAVE A REPLY

Please enter your comment!
Please enter your name here