ಚಿತ್ರದುರ್ಗ: ಐಸ್ ಕ್ರೀಂ ಆಸೆ ತೋರಿಸಿ ಒಂಬತ್ತು ವರ್ಷದ ಬಾಲಕಿ ಮೇಲೆ 56 ವರ್ಷದ ವ್ಯಕ್ತಿ ಅತ್ಯಾಚಾರ ಮಾಡಿರುವಂತಹ ಘಟನೆ ಚಿತ್ರದುರ್ಗ ನಗರದ ಬಡಾವಣೆಯಲ್ಲಿ ನಡೆದಿದೆ. ಅತ್ಯಾಚಾರ ಮಾಡಿದ ಸಾದಿಕ್ ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದು,
Advertisement
ನಗರದ ಅಗಸಹಳ್ಳಿ ಬಡಾವಣೆ ನಿವಾಸಿಯಾಗಿರುವ ಕಾಮುಕ, ಮನೆ ಬಳಿ ಆಡುತ್ತಿದ್ದ 3ನೇ ತರಗತಿ ಓದುವ ಮಗುವಿಗೆ ಐಸ್ ಕ್ರೀಂ ಆಸೆ ತೋರಿಸಿ ಗುಡ್ಡಕ್ಕೆ ಕರೆದೊಯ್ದು ಮೃಗೀಯ ವರ್ತನೆ ಮಾಡಿದ್ದಾನೆ.
ಅತ್ಯಾಚಾರಕ್ಕೆ ಒಳಗಾಗಿದ್ದ ಸಂತ್ರಸ್ಥ ಬಾಲಕಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಬಾಲಕಿ ಮೇಲೆ ಅತ್ಯಾಚಾರ ಎಸಗಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿ ಚಿತ್ರದುರ್ಗ ಮಹಿಳಾ ಠಾಣೆಯಲ್ಲಿ ಫೋಕ್ಸೋ ಕೇಸ್ ದಾಖಲು ಮಾಡಲಾಗಿದೆ.