ಚಿಕ್ಕಮಗಳೂರು:-ತುಂಬಿ ಹರಿಯುತ್ತಿದ್ದ ಭದ್ರಾ ನದಿಯಲ್ಲಿ ಹಸು ಕೊಚ್ಚಿ ಹೋದ ಘಟನೆ ಜರುಗಿದೆ. ಚಿಕ್ಕಮಗಳೂರಿನ ಕಳಸ ತಾಲೂಕಿನ ಹೆಬ್ಬಾಳೆ ಸೇತುವೆ ಬಳಿ ಘಟನೆ ಜರುಗಿದೆ.
ಸೇತುವೆ ತುದಿಯಲ್ಲಿದ್ದ ಹಸು ನೀರಿನ ರಭಸಕ್ಕೆ ಕೊಚ್ಚಿ ಹೋಗಿದೆ. ಕಳೆದ ವಾರವೂ ಹಸುವೊಂದು ಇದೇ ಸೇತುವೆ ಮೇಲೆ ಕೊಚ್ಚಿ ಹೋಗಿತ್ತು. ಇದೀಗ ಮತ್ತೊಂದು ಹಸು ನೋಡನೋಡುತ್ತಿದ್ದಂತೆ ಕೊಚ್ಚಿ ಹೋಗಿದೆ. ಕುದುರೆಮುಖ ಘಟ್ಟ ಪ್ರದೇಶದಲ್ಲಿ ಕಳೆದ ರಾತ್ರಿಯಿಂದ ನಿರಂತರ ಮಳೆಯಿಂದಾಗಿ ಜನರು ತತ್ತರಿಸಿ ಹೋಗಿದ್ದಾರೆ. ಹೆಬ್ಬಾಳ ಸೇತುವೆ ಮೇಲೆ 5-6 ಅಡಿ ನೀರು ಹರಿಯುತ್ತಿದೆ ಎನ್ನಲಾಗಿದೆ.
ರಾಜ್ಯದಾದ್ಯಂತ ಮಳೆಯ ಆರ್ಭಟ ಜೋರಾಗಿದ್ದು, ಹಲವು ಜಿಲ್ಲೆಗಳಲ್ಲಿ ಸಾಕಷ್ಟು ಸಾವು, ನೋವು ಸಂಭವಿಸಿದೆ.



