ಬೆಂಗಳೂರು: ಡೆಂಗ್ಯೂ ನಿಯಂತ್ರಣ ವಿಚಾರದಲ್ಲಿ ಆರೋಗ್ಯ ಇಲಾಖೆ ಸತತ ಪ್ರಯತ್ನಗಳನ್ನ ಮುಂದುವರಿಸಿದೆ. ಮುಂದಿನ ತಿಂಗಳಿನಿಂದ ಡೆಂಗ್ಯೂ ಪ್ರಕರಣಗಳಲ್ಲಿ ಇಳಮುಖ ಕಾಣುವ ನೀರಿಕ್ಷೆ ಹೊಂದಿದ್ದೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ನಗರದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಸಚಿವರು, ಡೆಂಗ್ಯೂ ನಿಯಂತ್ರಣ ವಿಚಾರದಲ್ಲಿ ಆರೋಗ್ಯ ಇಲಾಖೆ ಸತತ ಪ್ರಯತ್ನಗಳನ್ನ ಮುಂದುವರಿಸಿದೆ. ಮುಂದಿನ ತಿಂಗಳಿನಿಂದ ಡೆಂಗ್ಯೂ ಪ್ರಕರಣಗಳಲ್ಲಿ ಇಳಮುಖ ಕಾಣುವ ನೀರಿಕ್ಷೆ ಹೊಂದಿದ್ದೇವೆ ಎಂದರು.
ಕೆಲವು ಜಿಲ್ಲೆಗಳಲ್ಲಿ ಡೆಂಗ್ಯೂ ಪ್ರಕರಣಗಳು ಇಳಿಮುಖವಾಗಿವೆ. ರಾಜ್ಯದ ಒಟ್ಟು ಡೆಂಗ್ಯೂ ಪ್ರಕರಣಗಳಲ್ಲಿ ಬೆಂಗಳೂರಿನಲ್ಲಿಯೇ ಶೇ 50 ರಷ್ಟು ಡೆಂಗ್ಯೂ ಪ್ರಕರಣಗಳಿವೆ. ಹೀಗಾಗಿ ಬೆಂಗಳೂರಿನಲ್ಲಿ ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಹೆಚ್ವಿನ ಗಮನ ಹರಿಸಿ ಡೆಂಗ್ಯೂ ಹತೋಟಿಗೆ ತರುವಂತೆ ಸೂಚಿಸಿದ್ದೇನೆ ಎಂದರು.
ಇನ್ನೂ ಕೇರಳದಲ್ಲಿ ನಿಪಾ ವೈರಸ್ ಕಂಡುಬಂದಿರುವ ಹಿನ್ನೆಲೆಯಲ್ಲಿ ಕೇರಳ ಗಡಿ ಭಾಗದಲ್ಲಿ ಎಚ್ಚರಿಕೆ ವಹಿಸುತೆ ಸೂಚಿಸಲಾಗಿದೆ ಎಂದು ಇದೇ ವೇಳೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ರಾಜ್ಯದಲ್ಲಿ ನಿಪಾ ವೈರಸ್ ನ ಯಾವುದೇ ಪ್ರಕರಣಗಳು ಪತ್ತೆಯಾಗಿಲ್ಲ. ರಾಜ್ಯದಿಂದ ಕೇರಳಕ್ಕೆ ಪ್ರವಾಸ ಕೈಗೊಳ್ಳುವವರು ಎಚ್ಚರಿಕೆ ವಹಿಸಿ ಎಂದು ಮಾರ್ಗಸೂಚಿ ಹೊರಡಿಸಿದ್ದೇವೆ. ತೀರಾ ಅಗತ್ಯವಾಗಿದ್ದರೆ ಮಾತ್ರ ಕೇರಳ ಪ್ರವಾಸ ಕೈಗೊಳ್ಳಿ. ಅನಗತ್ಯವಾಗಿ ಕೇರಳಿಕ್ಕೆ ತೆರಳುವುದು ಬೇಡ ಎಂದು ರಾಜ್ಯದ ಜನರಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದರು.