ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ ದೇಶದ ಸಾಮಾನ್ಯ ಬಜೆಟ್ ಮಂಡಿಸುತ್ತಿದ್ದಾರೆ. ಈ ವೇಳೆ ವಾರ್ಷಿಕ 12 ಲಕ್ಷದವರೆಗೆ ಆದಾಯ ಹೊಂದಿರುವವರು ತೆರಿಗೆ ಕಟ್ಟುವಂತಿಲ್ಲ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮಧ್ಯಮ ವರ್ಗಕ್ಕೆ ಕೇಂದ್ರ ಸರ್ಕಾರ ಬಂಪರ್ ಗಿಫ್ಟ್ ಕೊಟ್ಟಿದೆ.
ಪ್ರತಿ ಬಾರಿ ಬಜೆಟ್ನಲ್ಲಿ ಆದಾಯ ತೆರಿಗೆ ವಿನಾಯಿತಿಯನ್ನು ಹೆಚ್ಚಿಸಬೇಕು ಎಂಬ ಆಗ್ರಹ ಕೇಳಿ ಬರುತ್ತಿತ್ತು. ಹೀಗಾಗಿ ಈ ಬಾರಿ ಗರಿಷ್ಠ 10 ಲಕ್ಷ ರೂ.ವರೆಗೆ ತೆರಿಗೆ ವಿನಾಯಿತಿ ನೀಡಬಹುದು ಎಂಬ ಮಾತು ಕೇಳಿ ಬಂದಿತ್ತು. ಆದರೆ ಈ ಬಾರಿ ನಿರ್ಮಲಾ ಸೀತಾರಾಮನ್ ಅವರು ಬರೋಬ್ಬರಿ 12 ಲಕ್ಷ ರೂ. ವರೆಗೆ ತೆರಿಗೆ ವಿನಾಯಿತಿ ಘೋಷಣೆ ಮಾಡಿ ಮಧ್ಯಮ ವರ್ಗದವರಿಗೆ ಬಂಪರ್ ಘೋಷಣೆ ಮಾಡಿದ್ದಾರೆ.
12 ಲಕ್ಷ ರೂಪಾಯಿವರೆಗೂ ಆದಾಯ ತೆರಿಗೆ ಇಲ್ಲ 4 ಲಕ್ಷದಿಂದ 8 ಲಕ್ಷದವರೆಗೆ ಶೇ.5ರಷ್ಟು ತೆರಿಗೆ 8 ಲಕ್ಷದಿಂದ 11 ಲಕ್ಷದವರೆಗೆ ಶೇ.10ರಷ್ಟು ತೆರಿಗೆ 12 ಲಕ್ಷದಿಂದ 15 ಲಕ್ಷದವರೆಗೆ ಶೇ.15ರಷ್ಟು ತೆರಿಗೆ 15 ಲಕ್ಷದಿಂದ 20 ಲಕ್ಷದವರೆಗೆ ಶೇ.20ರಷ್ಟು ತೆರಿಗೆ 20 ಲಕ್ಷದಿಂದ 24 ಲಕ್ಷದರೆಗೆ ಶೇ.25ರಷ್ಟು ತೆರಿಗೆ 24 ಲಕ್ಷ ಮೇಲ್ಪಟ್ಟ ಆದಾಯಕ್ಕೆ ಶೇ.30ರಷ್ಟು ತೆರಿಗೆ ಎಂದು ಹೇಳಿದ್ದಾರೆ.