HomeIndia Newsಪೆಟ್ರೋಲ್–ಡೀಸೆಲ್ ದರ ಏರಿಕೆ ಇಲ್ಲ: ವದಂತಿಗಳಿಗೆ ಕೇಂದ್ರ ಸರ್ಕಾರ ಸ್ಪಷ್ಟನೆ

ಪೆಟ್ರೋಲ್–ಡೀಸೆಲ್ ದರ ಏರಿಕೆ ಇಲ್ಲ: ವದಂತಿಗಳಿಗೆ ಕೇಂದ್ರ ಸರ್ಕಾರ ಸ್ಪಷ್ಟನೆ

For Dai;y Updates Join Our whatsapp Group

Spread the love

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 25–28 ರೂಪಾಯಿ ಏರಿಕೆಯಾಗಲಿದೆ ಎಂಬ ವರದಿಗಳನ್ನು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ತಳ್ಳಿಹಾಕಿದ್ದು, ಇಂತಹ ಯಾವುದೇ ದರ ಏರಿಕೆ ಕುರಿತು ಚಿಂತನೆ ಇಲ್ಲ ಎಂದು ಸ್ಪಷ್ಟಪಡಿಸಿದೆ.

ಈ ಕುರಿತು ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡ ಸಚಿವಾಲಯ, ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೆಚ್ಚಳದ ಬಗ್ಗೆ ಕೆಲವು ಮಾಧ್ಯಮಗಳಲ್ಲಿ ಪ್ರಕಟವಾಗಿರುವ ಸುದ್ದಿಗಳು ತಪ್ಪು ಮತ್ತು ದಾರಿತಪ್ಪಿಸುವಂತಿವೆ ಎಂದು ತಿಳಿಸಿದೆ. ಇಂತಹ ವರದಿಗಳು ನಾಗರಿಕರಲ್ಲಿ ಅನಗತ್ಯ ಭೀತಿ ಹುಟ್ಟಿಸುವ ಉದ್ದೇಶ ಹೊಂದಿವೆ ಎಂದು ಸರ್ಕಾರ ಹೇಳಿದೆ.

ಕೆಲವು ವರದಿಗಳಲ್ಲಿ ಏಪ್ರಿಲ್ 29ರಂದು ವಿಧಾನಸಭಾ ಚುನಾವಣೆಗಳು ಮುಗಿದ ಬಳಿಕ ಇಂಧನ ದರ ಏರಿಕೆಯಾಗಬಹುದು ಎಂದು ಹೇಳಲಾಗಿತ್ತು. ಕಚ್ಚಾ ತೈಲದ ಬೆಲೆ ಬ್ಯಾರೆಲ್‌ಗೆ 120 ಡಾಲರ್ ಸಮೀಪಿಸುತ್ತಿರುವ ಹಿನ್ನೆಲೆ ಲೀಟರ್‌ಗೆ 25–28 ರೂಪಾಯಿ ಹೆಚ್ಚಳವಾಗಬಹುದು ಎಂಬ ಅಂದಾಜುಗಳನ್ನೂ ವ್ಯಕ್ತಪಡಿಸಲಾಗಿತ್ತು. ಆದರೆ, ಇಂತಹ ಯಾವುದೇ ಪ್ರಸ್ತಾವನೆ ಸರ್ಕಾರದ ಪರಿಗಣನೆಯಲ್ಲಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಕಳೆದ ನಾಲ್ಕು ವರ್ಷಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳವಾಗದ ಏಕೈಕ ದೇಶ ಭಾರತವೆಂದು ಸರ್ಕಾರ ಪುನರುಚ್ಚರಿಸಿದೆ. ಮಧ್ಯಪ್ರಾಚ್ಯದ ಸಂಘರ್ಷದ ನಡುವೆಯೂ ನಾಗರಿಕರನ್ನು ಬೆಲೆ ಏರಿಕೆಯಿಂದ ರಕ್ಷಿಸಲು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದಿದೆ.

ಇನ್ನೂ, ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ 10 ರೂಪಾಯಿಗಳಷ್ಟು ಕಡಿಮೆ ಮಾಡಿರುವುದಾಗಿ ಸರ್ಕಾರ ತಿಳಿಸಿದೆ. ದೇಶದ ಎಲ್ಲಾ ರಿಫೈನರಿಗಳು ಸಾಕಷ್ಟು ಕಚ್ಚಾ ತೈಲವನ್ನು ಹೊಂದಿದ್ದು, ಹೆಚ್ಚಿನ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸುತ್ತಿವೆ. ದೇಶದಲ್ಲಿ ಇಂಧನ ಸರಬರಾಜು ಸಮರ್ಪಕವಾಗಿರುವುದರಿಂದ ಯಾವುದೇ ಕೊರತೆ ಉಂಟಾಗುವುದಿಲ್ಲ ಎಂದು ಸಚಿವಾಲಯ ದೃಢಪಡಿಸಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!