ಮೈಸೂರು: ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಯಾವುದೇ ಅನ್ಯಾಯ ಆಗುತ್ತಿಲ್ಲ. ರಾಜ್ಯವೇ ಅನ್ಯಾಯ ಮಾಡಿಕೊಳ್ಳುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಮೈಸೂರಿನ ಪತ್ರಕರ್ತರ ಭವನದಲ್ಲಿ ಮಾತನಾಡಿದ ಅವರು, ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ 5,300 ಕೋಟಿ ರೂ. ಹಣ ಘೋಷಿಸಿದೆ. ಅನುದಾನ ಕೊಟ್ಟಿಲ್ಲ ಅಂತ ಕಾಂಗ್ರೆಸ್ನವರು ಆರೋಪಿಸುತ್ತಾರೆ.
ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಯಾವುದೇ ಅನ್ಯಾಯ ಆಗುತ್ತಿಲ್ಲ. ರಾಜ್ಯವೇ ಅನ್ಯಾಯ ಮಾಡಿಕೊಳ್ಳುತ್ತಿದೆ. ಕೇವಲ ಬೈದಾಡಿಕೊಂಡು ತಿರುಗಾಡುವುದರಿಂದ ಪ್ರಯೋಜನವಾಗಲ್ಲ. ಯೋಜನೆಗಳ ಅನುಷ್ಠಾನಕ್ಕೆ ರಾಜ್ಯದ ಪಾಲಿನ ಹಣ ಮೀಸಲಿಡಬೇಕು. ಆಗ ಮಾತ್ರ ಕೇಂದ್ರ ಸರ್ಕಾರ ತನ್ನ ಪಾಲಿನ ಹಣ ಬಿಡುಗಡೆ ಮಾಡುತ್ತೆ. ಯೋಜನೆಗಳ ಅನುಷ್ಠಾನಕ್ಕೆ ರಾಜ್ಯದ ಪಾಲಿನ ಹಣ ಮೀಸಲಿಡದೆ, ಕೇಂದ್ರದ ವಿರುದ್ಧ ವಿನಾಕಾರಣ ಆರೋಪ ಮಾಡೋದು ಸರಿಯಲ್ಲ ಎಂದು ವಾಗ್ದಾಳಿ ಮಾಡಿದರು.



