ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಇನ್ನು ಮುಂದೆ ಹೊಸ ಜನೌಷಧಿ ಕೇಂದ್ರಗಳನ್ನು ತೆರೆಯಲು ಪರವಾನಗಿ ನೀಡುವುದಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಗೌಡ ಪಾಟೀಲ್ ಹೇಳಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು,
ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳು ಉಚಿತವಾಗಿ ಸಿಗುವಾಗ ಜನೌಷಧಿ ಕೇಂದ್ರ ಯಾಕೆ ಬೇಕು? ಇದರಿಂದ ಆಸ್ಪತ್ರೆಯ ಒಳಗಡೆ ವರ್ತುಲ ಸೃಷ್ಟಿಯಾಗುತ್ತದೆ. ಹಿಂದೆ ಯಾರು ಅನುಮತಿ ಕೊಟ್ಟಿದ್ದಾರೋ ಗೊತ್ತಿಲ್ಲ. ನಾನು ಹೊಸ ಜನೌಷಧಿ ಕೇಂದ್ರ ತೆರೆಯಲು ಅವಕಾಶ ನೀಡುವುದಿಲ್ಲ ಎಂದು ಖಡಕ್ ಆಗಿಯೇ ಹೇಳಿದ್ದಾರೆ.
ಸರ್ಕಾರಿ ಆಸ್ಪತ್ರೆಗಳಲ್ಲೇ ಉಚಿತವಾಗಿ ಮಾತ್ರೆ ಕೊಡುತ್ತೇವೆ. ಹೀಗಾಗಿ ಜನರು ದುಡ್ಡು ನೀಡಿ ಮಾತ್ರೆ ಖರೀದಿ ಮಾಡುವುದು ಯಾಕೆ ಎಂದು ಸಚಿವರು ಪ್ರಶ್ನೆ ಮಾಡಿದ್ದಾರೆ. ಸರ್ಕಾರದಿಂದ ಔಷಧಿಗಳು, ಮಾತ್ರೆಗಳು ಉಚಿತ ಬರುತ್ತದೆ ಹೌದು. ಆದರೆ ಎಲ್ಲಾ ಮಾತ್ರೆಗಳು ಸಿಗುವುದಿಲ್ಲ. ಹೀಗಾಗಿ ಸರ್ಕಾರಿ ಆಸ್ಪತ್ರೆಯ ಬಳಿ ಜನೌಷಧಿ ಕೇಂದ್ರ ತೆರೆದರೆ ನಿಮಗೆ ಏನು ಕಷ್ಟ ಎಂದು ಜನರು ಈಗ ಸರ್ಕಾರಕ್ಕೆ ಪ್ರಶ್ನೆ ಮಾಡುತ್ತಿದ್ದಾರೆ