ನಮ್ಮ ಅವಧಿಯಲ್ಲಿ ರೈತರಿಗೆ ಯಾವುದೇ ನೋಟಿಸ್ ಕೊಟ್ಟಿಲ್ಲ: ಬೊಮ್ಮಾಯಿ ಸ್ಪಷ್ಟನೆ

0
haveri
Spread the love

ಹುಬ್ಬಳ್ಳಿ: ನಮ್ಮ ಅವಧಿಯಲ್ಲಿ ರೈತರಿಗೆ ಯಾವುದೇ ನೋಟಿಸ್ ಕೊಟ್ಟಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ‌. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಕ್ಪ್ ಸಚಿವ ಜಮೀರ್ ಅಹಮದ್ ಅವರು ನನ್ನ ಹಳೆಯ ವಿಡಿಯೊ ಬಿಡುಗಡೆ ಮಾಡಿ, ನಾನು ರೈತರ ಜಮೀನು ವಶಪಡಿಸಿಕೊಳ್ಳಲು ವಕ್ಫ್‌ಗೆ ಹೇಳಿದ್ದೆ ಎಂದು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ‌.

Advertisement

ನಾನು ವಕ್ಫ್ ಸಮಾರಂಭದಲ್ಲಿ ಮಾತನಾಡಿದ್ದೆ. ವಕ್ಫ್ ಬೋರ್ಡ್‌ನ ಯಾವುದೇ ಸಭೆ ಮಾಡಿಲ್ಲ. ನಾನು ಅಂದು ಹೇಳಿರುವುದು ಅನ್ವರ್ ಮಾನಿಪ್ಪಾಡಿ ಅವರ ಸಮಿತಿ ವರದಿ ನೀಡಿದೆ. ಯಾವ ಕಾಂಗ್ರೆಸ್ ನ್ ದೊಡ್ಡ ದೊಡ್ಡ ನಾಯಕರು ಮೋಸದಿಂದ ಎಷ್ಡೆಷ್ಟು ವಕ್ಫ್ ಆಸ್ತಿ ನುಂಗಿದ್ದಾರೆ ಎಂದು ಅನ್ವರ್ ಮಾನಿಪ್ಪಾಡಿ ವರದಿಯಲ್ಕಿ ಸ್ಪಷ್ಟವಾಗಿದೆ‌. ನಾವು ರೈತರಿಗೆ ಯಾವುದೇ ನೋಟಿಸ್ ಕೊಟ್ಟಿಲ್ಲ ರೈತರ ಜಮೀನು ವಶ ಪಡೆದುಕೊಂಡಿಲ್ಲ ಎಂದು ಹೇಳಿದರು.

ಇನ್ನೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರಿಗೆ ಕೊಟ್ಟಿರುವ ನೋಟಿಸ್ ವಾಪಸ್ ಪಡೆಯುವಂತೆ ಹೇಳಿರುವುದು ಕಣ್ಣೊರೆಸುವ ತಂತ್ರ. ನೋಟಿಸ್ ವಾಪಸ್ ಒಡೆದು ಚುನಾವಣೆ ಮುಗಿದ ನಂತರ ಮತ್ತೆ ನೋಟಿಸ್ ಕೊಡುವುದಿಲ್ಲ ಅನ್ನುವುದು ಏನ್ ಗ್ಯಾರೆಂಟಿ.

ಅದರ ಬದಲು ವಕ್ಫ್ ನಲ್ಲಿ ಏನ್ ಗೆಜೆಟ್ ನೋಟಿಫಿಕೇಶ್ನಲ‌ನ್ ಆಗಿದೆ ಅದನ್ನು ರದ್ದು ಮಾಡಬೇಕು. ಮುಖ್ಯಮಂತ್ರಿಗಳಿಗೆ ರೈತರ ಬಗ್ಗೆ ನಿಜವಾಗಲೂ ಕಾಳಜಿ, ರೈತರ ಆಸ್ತಿ ಉಳಿಸಬೇಕೆಂದಿದ್ದರೆ ಅವರ ಮೇಲೆ ಗೌರವ ಇದ್ದರೆ, ಸಿಎಂ ಕೂಡಲೆ ವಕ್ಫ್ ಗೆಜೆಟ್ ನೋಟಿಫಿಕೇಶ್‌ನ್ ರದ್ದು ಮಾಡಬೇಕು. ಯಾವುದೇ ರೈತರಿಗೆ ನೋಟಿಸ್ ಕೊಡಬಾರದು ಎಂದು ಆಗ್ರಹಿಸಿದರು.


Spread the love

LEAVE A REPLY

Please enter your comment!
Please enter your name here