ಮೈಸೂರು: ಜನರ ಆಶೀರ್ವಾದ ಇರುವವರೆಗೂ ಯಾರು ಏನೂ ಮಾಡಲು ಆಗಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಜನರ ಆಶೀರ್ವಾದ ಇರುವವರೆಗೂ ಯಾರು ಏನೂ ಮಾಡಲು ಆಗಲ್ಲ.
Advertisement
ಜನರು, ಚಾಮುಂಡಿ ಆಶೀರ್ವಾದಿಂದ 2ನೇ ಬಾರಿ ಸಿಎಂ ಆಗಿದ್ದೇನೆ ಎಂದು ಹೇಳಿದರು. ಇನ್ನು ಇಂದು ಹಂಪ ನಾಗರಾಜಯ್ಯರಿಂದ ಮೈಸೂರು ದಸರಾ ಉದ್ಘಾಟನೆಯಾಗಿದೆ. ನನಗೆ ಮೈಸೂರು ದಸರಾ ಉದ್ಘಾಟಕರ ಆಯ್ಕೆ ಜವಾಬ್ದಾರಿ ಕೊಟ್ಟಿದ್ದರು. ಹಂಪ ನಾಗರಾಜಯ್ಯ ಸಾಹಿತ್ಯ ಲೋಕಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.