ಡಿಕೆ ಶಿವಕುಮಾರ್ ಸಿಎಂ ಆಗುವುದನ್ನು ತಪ್ಪಿಸಲು ಯಾರಿಗೂ ಸಾಧ್ಯವಿಲ್ಲ: ವೀರಪ್ಪ ಮೊಯ್ಲಿ!

0
Spread the love

ಉಡುಪಿ:- ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿಗಳು ಆಗಿರುವ ಡಿಕೆ ಶಿವಕುಮಾರ್ ಅವರು ಸಿಎಂ ಆಗುವುದನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿಕೆ ಕೊಟ್ಟಿದ್ದಾರೆ.

Advertisement

ಉಡುಪಿಯ ಕಾರ್ಕಳದಲ್ಲಿ ನಡೆದ ಕಾಂಗ್ರೆಸ್ ಕುಟುಂಬೋತ್ಸವದಲ್ಲಿ ಮಾತನಾಡಿದ ಅವರು, ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಆಗುವುದು ತೀರ್ಮಾನ ಆಗಿರುವ ವಿಷಯ. ಡಿಕೆ ಶಿವಕುಮಾರ್ ಅವರಿಗೆ ಮೊದಲು ಎಂಎಲ್ಎ ಟಿಕೆಟ್ ಕೊಡಿಸಿದ್ದೇ ನಾನು. ಅವರು ಈಗ ಯಶಸ್ವಿ ನಾಯಕರಾಗಿ ಬೆಳೆದಿರುವುದು ಖುಷಿಯ ಸಂಗತಿ ಎಂದಿದ್ದಾರೆ.

ಡಿಕೆಶಿ ಅವರೇ ನೀವು ಯಾವುದಕ್ಕೂ ಪ್ರತಿಕ್ರಿಯೆ ಕೊಡಬಾರದು. ನಿಮ್ಮ ವಿರುದ್ಧ ಹೇಳಿಕೆಗಳು ಬರಬಹುದು, ಹೋಗಬಹುದು. ಅದರ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ ಎಂದು ವೀರಪ್ಪ ಮೊಯ್ಲಿ ಹೇಳಿದ್ದಾರೆ.

ಡಿಕೆ ಸಿಎಂ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ಯಾರೂ ಕೂಡ ಆತಂಕ ಪಡಬೇಕಾದ ಅವಶ್ಯಕತೆ ಇಲ್ಲ. ಟೀಕೆ ಮಾಡುವವರು ವೈಯಕ್ತಿಕ ತೃಪ್ತಿಗೆ ಟೀಕೆ ಮಾಡಬಹುದು. ಸಿಎಂ ಹುದ್ದೆ ಯಾರೂ ಕೊಡುವ ವರ ಅಲ್ಲ. ಅದು ಡಿ.ಕೆ.ಶಿವಕುಮಾರ್​​​ ಸಂಪಾದನೆ ಮಾಡಿರುವ ಶಕ್ತಿ. ಅವರು ಸಂಪಾದನೆ ಮಾಡಿರುವ ಶಕ್ತಿಯೇ ಮುಖ್ಯಮಂತ್ರಿ ಪದವಿ. ಈ ಪುಣ್ಯ ಭೂವಿಯಲ್ಲಿ ಆಡಿದ ಮಾತು ನೂರಕ್ಕೆ ನೂರು ಸತ್ಯ. ಕೋಟಿ ಕೋಟಿ ಪ್ರಯತ್ನ ಮಾಡಿದರೂ ಡಿಕೆಶಿಗೆ ಸಿಎಂ ಹುದ್ದೆ ತಪ್ಪಿಸಲು ಆಗುವುದಿಲ್ಲ ಎಂದರು.


Spread the love

LEAVE A REPLY

Please enter your comment!
Please enter your name here