ಬೆಂಗಳೂರು: ವಿಜಯೇಂದ್ರ ಸೇರಿ ಯಾರಿಗೂ 3 ಜನ ಸೇರಿಸೋ ಯೋಗ್ಯತೆ ಇಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ಸಿಡಿದೆದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಮೂರು ನನಗೆ ಲಕ್ಕಿ, 3ನೇ ಬಾರಿ ಉಚ್ಚಾಟನೆ ಮಾಡಿರೋದು,
Advertisement
ಮುಂದೆ ಏನಾಗುತ್ತೆ ನೋಡಿ, ಇದಕ್ಕೆ ಕಾರಣಕರ್ತರಾದವರು ನಾಶ ಆಗ್ತಾರೆ. ಯಾರ ಮನವರಿಕೆಯೂ ನಾನು ಮಾಡಲ್ಲ. ಜನಮೆಚ್ಚಿದ ನಾಯಕ ಯಾರೂ ಇಲ್ಲ. ವಿಜಯೇಂದ್ರ ಸೇರಿ ಯಾರಿಗೂ 3 ಜನ ಸೇರಿಸೋ ಯೋಗ್ಯತೆ ಇಲ್ಲ. ಆದ್ರೆ ನಾನು ಬಾಡಿಗೆ ಜನ ತಂದಿಲ್ಲ ಎಂದರು.
ಇನ್ನೂ ನಾನು ಮತ್ತೆ ದೆಹಲಿಗೆ ಹೋಗಲ್ಲ. ಮರುಪರಿಶೀಲನೆಗೆ ನಾನು ಮನವಿ ಮಾಡಲ್ಲ. ನಾನು ಹಿಂದೂ ಪರವಾಗಿ ಹೋರಾಟ ಮಾಡ್ತೇನೆ. ಇಡೀ ರಾಜ್ಯ ಸುತ್ತುತ್ತೇನೆ. ಜನರೇ ಹೊಸ ಪಕ್ಷ ಕಟ್ಟಲು ಸಲಹೆ ಕೊಡ್ತಿದ್ದಾರೆ. ಹಿಂದೂಗಳ ರಕ್ಷಣೆ ಮಾಡುವವರು ಯಾರೂ ಇಲ್ಲ. ಉ.ಕರ್ನಾಟಕದ ಬಗ್ಗೆ ಮಾತನಾಡುವವರು ಯಾರೂ ಇಲ್ಲ ಅಂತ ಯತ್ನಾಳ್ ಹೇಳಿದ್ದಾರೆ.