ಬೆಳಗಾವಿ: ರೈತರ ಪರ ಯಾವುದೇ ಯೋಜನೆಗಳು ಬರ್ತಿಲ್ಲ ಎಂದು ತಮ್ಮದೇ ಸರ್ಕಾರದ ವಿರುದ್ಧ ಶಾಸಕ ರಾಜು ಕಾಗೆ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ರೈತರು ಒಂದು ವರ್ಷ ಬೆಳೆಗಳನ್ನು ಬೆಳೆಯುವುದನ್ನು ಬಿಟ್ಟರೇ ನೀವೇನು ತಿಂತಿರೀ..? ನಿಮ್ಮ ಬಳಿ ರೊಕ್ಕ, ಬಂಗಾರ ಬೆಳ್ಳಿ ಸಾಕಷ್ಟು ಇರಬಹುದು, ಆದ್ರೆ ಅದನ್ನ ತಿನ್ನೋಕಾಗುತ್ತಾ..? ಮೊದಲು ರೈತರನ್ನು ಬದುಕಿಸುವ ಕೆಲಸ ಮಾಡಿ ಎಂದು ತಮ್ಮದೇ ಸರ್ಕಾರದ ವಿರುದ್ಧ ಹರಿಹಾಯ್ದರು.
ಇನ್ನೂ ಕಳೆದ ಒಂದು ವರ್ಷದಿಂದ ನನ್ನ ಗೋಳನ್ನು ಸರ್ಕಾರ ಆಲಿಸುತ್ತಿಲ್ಲ. ಹೀಗೆ ಪರಿಸ್ಥಿತಿ ಮುಂದುವರೆದ್ರೆ ವಿಧಾನಸೌಧದಲ್ಲಿಯೇ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಓರ್ವ ಮಂತ್ರಿಗೆ ಹೇಳಿದ್ದೇ, ನೀನ್ಯಾಕೆ ಆತ್ಮಹತ್ಯೆ ಮಾಡಿಕೊಳ್ತಿಯಾ, ನಿನ್ನ ಕೆಲಸ ಮಾಡ್ತಿವಿ ಅಂತ ಹೇಳಿದ ಮಂತ್ರಿಗಳಿದ್ದಾರೆ ಎಂದು ಕಿಡಿಕಾರಿದರು.
ನಾವೇನು ವಿಧಾನಸೌಧಕ್ಕೆ ಹೋಗಿ ಖಾಲಿ ಕುಂತಿಲ್ಲ, ರೈತರ ಕಷ್ಟ ಸುಖಗಳನ್ನು ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡುತ್ತಿದ್ದೇನೆ. ಆದ್ರೆ ಸರ್ಕಾರದವರು ನಮಗೆ ಸ್ಪಂದನೆ ಮಾಡುತ್ತಿಲ್ಲ. ಅದ್ದರಿಂದ ಏನು ಆಗೋದಿದೆ. ಬೇಕಾದ್ರೆ ನಾನು ನಾಳೆ ಹೋಗಿ ರಾಜೀನಾಮೆ ಕೊಡುತ್ತೇನೆ ಎಂದು ಎಚ್ಚರಿಕೆ ನೀಡಿದರು.