ಬೆಂಗಳೂರು: ಮುಡಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಯಾವುದೇ ಪಾತ್ರವಿಲ್ಲ. ಇದೊಂದು ರಾಜಕೀಯ ಷಡ್ಯಂತ್ರ ಎಂದು ಬಳ್ಳಾರಿ ಖಾಸಗಿ ಹೋಟೆಲ್ನಲ್ಲಿ ಸುದ್ದಿಗೋಷ್ಠಿ ನಡೆಸಿ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಕಿಡಿಕಾರಿದ್ದಾರೆ. ಇದೇ ವಿಚಾರ ಇಟ್ಟುಕೊಂಡು ರಾಜೀನಾಮೆ ಕೊಡುವ ಅಗತ್ಯವಿಲ್ಲ.
Advertisement
ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡಲ್ಲ. ಬಿಜೆಪಿ ಅವರು ಪಾದಯಾತ್ರೆ ಮಾಡಿದ್ರು. ಆದರೆ ಏನು ಪ್ರಯೋಜನ ಆಗಿಲ್ಲ. ಹೀಗಾಗಿ ಪ್ರಾಸಿಕ್ಯೂಷನ್ ಜಾರಿ ಮಾಡಿಸಿದ್ದಾರೆ. ಬಸವರಾಜ ಬೊಮ್ಮಾಯಿ ಇದ್ದಾಗ ಸೈಟ್ ಕೊಟ್ಟುದ್ದು. ಇದು ಬಿಜೆಪಿ ಅವರು ಮಾಡಿದ ಷಡ್ಯಂತ್ರ ಎಂದರು.