ವಿಜಯಪುರ:- ದಸರಾದಲ್ಲಿ ಹಿಂದೂಗಳು ಮುಸ್ಲಿಂ ವ್ಯಾಪಾರಿಗಳ ಬಳಿ ವ್ಯಾಪಾರ ವಹಿವಾಟು ಮಾಡಬಾರದು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಪ್ರಕಟಣೆ ಮೂಲಕ ಗ್ರಾಹಕರಲ್ಲಿ ಮನವಿ ಮಾಡಿದ್ದಾರೆ.
ಹಣೆಗೆ ಕುಂಕುಮ ಹಚ್ಚಿಕೊಂಡು ವ್ಯಾಪಾರ ಮಾಡುವ ಹಿಂದೂಗಳ ಹತ್ತಿರವೇ ಪೂಜಾ ಸಾಮಾಗ್ರಿಗಳನ್ನು ಖರೀದಿಸುವುದರಿಂದ, ನಮ್ಮ ಹಬ್ಬಗಳ ಪಾವಿತ್ರ್ಯತೆ ಕಾಪಾಡಿಕೊಂಡು, ಮಡಿವಂತಿಕೆಯಿಂದ ಧರ್ಮಾನುಸಾರವಾಗಿ ನಡೆದುಕೊಳ್ಳುವ ಜೊತೆಗೆ ಭಗವಂತನ ಕೃಪೆಗೆ ಪಾತ್ರರಾಗಲು ನೆರವಾಗುತ್ತದೆ.
ಪವಿತ್ರ ಹಿಂದೂ ಧರ್ಮದ ಬಗ್ಗೆ ಗೌರವವಿಲ್ಲದ, ಹಿಂದೂ ದೇವರನ್ನು ನಂಬದ, ಹಿಂದೂಗಳನ್ನು ವಿರೋಧಿಸುವರು ಅಲ್ಲಿಯೇ ತಮ್ಮ ಬುತ್ತಿಯಲ್ಲಿ ಮಾಂಸಾಹಾರ ತಂದು ತಿಂದು ಅಥವಾ ಮನೆಯಲ್ಲಿ ಮಾಂಸಾಹಾರ ತಿಂದು ಬಂದು, ಅಶುದ್ಧತೆಯಿಂದ ವ್ಯಾಪಾರ ಮಾಡುವವರ ಹತ್ತಿರ ಯಾವುದೇ ಕಾರಣಕ್ಕೂ ಪೂಜಾ ಸಾಮಾಗ್ರಿಗಳನ್ನು ತೆಗೆದುಕೊಳ್ಳಬಾರದು.
ಅಂತವರ ಹತ್ತಿರ ಖರೀದಿಸಿದ ವಸ್ತುಗಳಿಂದ, ನಾವು ಪೂಜಿಸುವ ಭಗವಂತನ ಪೂಜೆಯು ಅಪವಿತ್ರತೆಯಿಂದ ಕೂಡಿ, ಭಗವಂತನ ಕೃಪೆಗೆ ಪಾತ್ರರಾಗುವುದಿಲ್ಲ ಎಂದು ತಿಳಿಸಿದ್ದಾರೆ.
ಇದಕ್ಕೆ ಮುಸ್ಲಿಂ ವ್ಯಾಪಾರಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.